PLEASE LOGIN TO KANNADANET.COM FOR REGULAR NEWS-UPDATES


ಜಿಲ್ಲಾ ಪೊಲೀಸ್ ಇಲಾಖೆಯಿಂದ ನಾಗರಿಕ/ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನ.೧೬ ರಂದು ಬೆಳಿಗ್ಗೆ ೧೧ ರಿಂದ ೧೨.೩೦ ರವರೆಗೆ ಜಿಲ್ಲೆಯ ಎರಡು ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ಟಿ.ಡಿ. ಪವಾರ್ ಅವರು ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಾದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು ೪೪೦ ಅಭ್ಯರ್ಥಿಗಳಿದ್ದು, ರೋಲ್ ನಂಬರ್ ೫೨೪೦೦೦೧ ರಿಂದ ೫೨೪೦೪೪೦ ರವರೆಗೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಒಟ್ಟು ೩೨೫ ಅಭ್ಯರ್ಥಿಗಳಿದ್ದು, ರೋಲ್ ನಂಬರ್ ೫೨೪೦೪೪೧ ರಿಂದ ೫೨೪೦೭೬೫ ರವರೆಗೆ ಇರುತ್ತವೆ. ಜಿಲ್ಲೆಯಲ್ಲಿ ಒಟ್ಟು ೭೬೫ ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ದೈಹಿಕ ಪರೀಕ್ಷೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳು ಕರೆ ಪತ್ರಗಳನ್ನು ಇಲಾಖೆಯ ವೆಬ್‌ಸೈಟ್www.ksp.gov.in  ನಿಂದ ಪಡೆದುಕೊಳ್ಳಬಹುದಾಗಿದೆ. ಲಿಖಿತ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ ಹಾಗೂ ಲಿಖಿತ ಪರೀಕ್ಷೆಗೆ ಹಾಜರಾಗಬೇಕಾದ ಪರೀಕ್ಷಾ ಕೇಂದ್ರದ ವಿವರಗಳನ್ನು ಪ್ರಕಟಿಸಲಾಗಿದೆ.
ಕರೆಪತ್ರದ ಜೊತೆಗೆ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯ ಉತ್ತೀರ್ಣರಾದ ಫಲಿತಾಂಶ ಪತ್ರ ಹಾಗೂ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು. ಕರೆಪತ್ರವನ್ನು ಪಡೆಯದೇ ಇರುವವರಿಗೆ, ನಿಗದಿತ ದಿನಾಂಕ ಮತ್ತು ಸಮಯದಲ್ಲಿ ಹಾಜರಾಗದಿರುವವರಿಗೆ ಲಿಖಿತ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ಟಿ.ಡಿ. ಪವಾರ್   ತಿಳಿಸಿದ್ದಾರೆ.

Advertisement

0 comments:

Post a Comment

 
Top