ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿ ಜಿಲ್ಲಾ ಪಂಚಾಯತಿ, ಸ್ವಚ್ಚ ಭಾರತ ಮಿಷನ್ ಯೋಜನೆಯಡಿಯಲ್ಲಿ ಗ್ರಾಮ ಪಂಚಾಯತಿ ಆವರಣದಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿದ್ದ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಅವರು ಮಾತನಾಡಿ, ಸ್ವಚ್ಛತೆ ಇಲ್ಲದಿದ್ದರೆ ಆರೋಗ್ಯ ಹಾಳಾಗುತ್ತದೆ, ತಾವು ಮನೆಯಲ್ಲಿ ಸ್ವಚ್ಚತೆ ಕಾಪಾಡಿದಂತೆ ರಸ್ತೆಯಲ್ಲಿಯೂ ಕೂಡಾ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಎಲ್ಲೇಂದರಲ್ಲಿ ಕಸ ಬಿಸಾಡಬಾರದು ನಿಗದಿತ ಸ್ಥಳದಲ್ಲಿ ಕಸ ಹಾಕಬೇಕು ಗ್ರಾಮ ಪಂಚಾಯತಿಗಳು ಈ ಕಾರ್ಯವನ್ನು ಆದ್ಯತೆಯ ಮೇಲೆ ತೆಗೆದುಕೊಂಡು ಸಂಪೂರ್ಣ ಗ್ರಾಮವನ್ನು ಬಹಿರ್ದೆಸೆ ಮುಕ್ತ ಗ್ರಾಮವನ್ನಾಗಿ ಮಾಡಬೇಕು. ೨೦೧೩-೧೪ ನೇ ಸಾಲಿನಲ್ಲಿ ಅತಿ ಹೆಚ್ಚು ವೈಯಕ್ತಿಕ ಶೌಚಾಲಯ ನಿರ್ಮಿಸಿ ರಾಜ್ಯದಲ್ಲಿ ಕೊಪ್ಪಳ ಜಿಲ್ಲೆಯು ಫ್ರಥಮ ಸ್ಥಾನ ಪಡೆಯಲಾಯಿತು. ಜಿಲ್ಲೆಯ ಜನರ ಹಾಗೂ ಜನ ಪ್ರತಿನಿಧಿಗಳು, ಅಧಿಕಾರಿಗಳ ಸಹಕಾರ ಮತ್ತು ಪ್ರೊತ್ಸಾಹದಿಂದ ಇದನ್ನು ಸಾಧಿಸಲಾಯಿತು. ೨೦೧೪-೧೫ ನೇ ಸಾಲಿನಲ್ಲಿ ರಾಷ್ಟ್ರದಲ್ಲಿಯೇ ಪ್ರಥಮ ಸ್ಥಾನದಲ್ಲಿ ಬರಲು ಎಲ್ಲರ ಸಹಕಾರ ಅವಶ್ಯಕವಾಗಿದೆ ಎಂದು ಮನವಿ ಮಾಡಿದ ಅವರು ಪ್ರತಿ ಗ್ರಾಮದ ಓಣಿಯಲ್ಲಿ ಕಸದ ತೊಟ್ಟಿಯನ್ನಿಡಲು ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಗ್ರಾಮದ ಜನರು ಕಸವನ್ನು ಕಸದ ತೊಟ್ಟಿಯಲ್ಲಿ ಕಸವನ್ನು ಹಾಕಬೇಕೆಂದು ಕೃಷ್ಣ ಉದಪುಡಿ ಅವರು ಮನವಿ ಮಾಡಿಕೊಂಡರು.
ಜಿ.ಪಂ. ಸದಸ್ಯ ಅರವಿಂದಗೌಡ ಪಾಟೀಲ್ ಅವರು ಮಾತನಾಡಿ, ಪ್ರತಿಯೊಬ್ಬರು ತಮ್ಮ ಮನೆಯ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಡುವುದರೊಂದಿಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು, ಈ ಕಾರ್ಯಕ್ರಮ ಹಿರೇವಂಕಲಕುಂಟಾ ಗ್ರಾಮಕ್ಕೆ ಸಿಮಿತವಾಗದೇ ಪ್ರತಿ ಹಳ್ಳಿಗಳಲ್ಲಿಯೂ ಚುನಾಯಿತ ಪ್ರತಿನಿಧಿಗಳು ಗ್ರಾಮ ಪಂಚಾಯತಿಯ ಸಿಬ್ಬಂದಿ ವಾರದಲ್ಲಿ ಒಂದು ದಿನ ಗ್ರಾಮದ ಸ್ವಚ್ಛತೆಯ ಕಾರ್ಯಕ್ರಮವನ್ನು ಮಾಡಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರೇವಂಕಲಕುಂಟಾ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಶಿವಮ್ಮ ಗಾಳೆಪ್ಪ ಓಜನಳ್ಳಿ ವಹಿಸಿದ್ದರು. ಯಲಬುರ್ಗಾ ತಾಲೂಕ ಕಾರ್ಯನಿವಾಹಕ ಅಧಿಕಾರಿ ಎಮ್.ಜಯಪ್ಪ, ತಾಲೂಕ ಪಂಚಾಯತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು, ಹಿರೇವಂಕಲಕುಂಟಾ ಹೊಬಳಿಯಲ್ಲಿ ಬರುವ ೭ ಗ್ರಾಮ ಪಂಚಾಯತಿಯ ಅಭಿವೃದ್ದಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಹೊಬಳಿ ಮಟ್ಟದ ಇಲಾಖೆಯ ಅಧಿಕಾರಿಗಳು ತಾಲೂಕಾ ಸಂಯೋಜಕರು ಭಾಗವಹಿಸಿದ್ದರು. ನಂತರ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು ಗ್ರಾಮದ ಸ್ವಚ್ಛತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
0 comments:
Post a Comment