PLEASE LOGIN TO KANNADANET.COM FOR REGULAR NEWS-UPDATES

 : ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ರಾಜೀವ್‌ಗಾಂಧಿ ಖೇಲ್ ಅಭಿಯಾನ ಗ್ರಾಮೀಣ ಕ್ರೀಡಾ ಕೂಟ ಗುಂಪು ೦೩ (ಹ್ಯಾಂಡಬಾಲ್, ಫುಟಬಾಲ್,) ಕ್ರೀಡೆಗಳನ್ನು ವಿಜಯಪುರದ ಡಾ|| ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ. ೦೩ ರಿಂದ ೦೫ ರ ವರೆಗೆ ನಡೆಯಲಿದೆ.
   ಕೊಪ್ಪಳ ಜಿಲ್ಲೆಯ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ  ಪ್ರಥಮ ಸ್ಥಾನ ಪಡೆದ ಸ್ಪರ್ಧಿಗಳು  ಅಲ್ಲದೆ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಮಾತ್ರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

      ಕೊಪ್ಪಳ ಜಿಲ್ಲೆಯ ಅರ್ಹ ಕ್ರೀಡಾ ಪಟುಗಳು ಡಿ. ೦೩ ರಂದು ಬೆಳಿಗ್ಗೆ  ೧೦ ಗಂಟೆಯೊಳಗಾಗಿ ವಿಜಯಪುರ ಡಾ||ಬಿ.ಆರ್.ಅಂಬೇಡ್ಕರ, ಜಿಲ್ಲಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕು.  ಕ್ರೀಡಾ ಪಟುಗಳು ತಮ್ಮ ಜಿಲ್ಲಾ ತಂಡದ ಧ್ವಜದೊಂದಿಗೆ ಸಂಜೆ ೩.೦೦ ಘಂಟೆಗೆ ಪಥಸಂಚಲನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕಾಗಿರುತ್ತದೆ. ಅಂತಹ ಕ್ರೀಡಾ ಪಟುಗಳು ನಿಗದಿತ ನಮೂನೆಯಲ್ಲಿ ತಮ್ಮ ಜನ್ಮ ದಿನಾಂಕ  ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ತರಬೇಕು. ಜಿಲ್ಲೆಯಿಂದ ಭಾಗವಹಿಸುವ ಕ್ರೀಡಾ ಪಟುಗಳಿಗೆ ವಿಜಯಪುರ ಜಿಲ್ಲೆಯಲ್ಲಿ ಸಾಮಾನ್ಯ ವಸತಿ ವ್ಯವಸ್ಥೆ ಹಾಗೂ ಕ್ರೀಡಾಂಗಣದಲ್ಲಿ ಉಟೋಪಹಾರದ ವ್ಯವಸ್ಥೆ ಕಲ್ಪಿಸಲಾಗಿದೆ.   ಕ್ರೀಡಾ ಪಟುಗಳು ತಮ್ಮ ಬ್ಯಾಂಕ ಖಾತೆಯ ನಂಬರ ಮತ್ತು ವಿಳಾಸದೊಂದಿಗೆ ಪೂರ್ಣ ಮಾಹಿತಿಯನ್ನು ತೆಗೆದುಕೊಂಡು ಹೋಗಬೇಕು. ಜಿಲ್ಲೆಯಿಂದ ಭಾಗವಹಿಸುವ ಸ್ಪರ್ಧಿಗಳಿಗೆ ಕೊಪ್ಪಳ ದಿಂದ ವಿಜಯಪುರ ಜಿಲ್ಲೆಯವರೆಗೆ ಹೋಗಿ ಬರುವ ಸಾಮಾನ್ಯ ಬಸ್ ದರವನ್ನು ನೀಡಲಾಗುವುದು. ಈ ವೆಚ್ಚವನ್ನು ಕ್ರೀಡಾಕೂಟ ಮುಕ್ತಾಯವಾದ ದಿನದಂದು ಜಿಲ್ಲೆಯ ಮೇಲ್ಚಿಚಾರಕರಿಂದ ಪಾವತಿಸುವ ವ್ಯವಸ್ಥೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ ೦೮೫೩೯-೨೦೧೪೦೦ ಕ್ಕೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಟಿ.ರಾಮಕೃಷ್ಣಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

0 comments:

Post a Comment

 
Top