PLEASE LOGIN TO KANNADANET.COM FOR REGULAR NEWS-UPDATES

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಲಬುರಗಿಯಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟದ ನಿರ್ಣಯಗಳು

ಶಿಕ್ಷಣ ಇಲಾಖೆ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

 2014-15ನೇ ಸಾಲಿನಿಂದ ಹೈದ್ರಾಬಾದ್-ಕರ್ನಾಟಕ ಭಾಗದ ಆಯ್ದ 250 ಗ್ರಾಮ ಪಂಚಾಯಿತಿಗಳಲ್ಲಿ ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಯ ರೂ.50.00 ಕೋಟಿಯ ಅನುದಾನದಿಂದ ಗ್ರಂಥಾಲಯ ಕಟ್ಟಡ ನಿರ್ಮಾಣ ಮಾಡಿ ಜ್ಞಾನ ಕೇಂದ್ರಗಳನ್ನು ತೆರೆಯಲಾಗುವುದು.

ಸಮಾಜ ಕಲ್ಯಾಣ ಇಲಾಖೆ : ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗಾಗಿ ಕೊಪ್ಪಳ ಜಿಲ್ಲೆಯ ಯಲ್ಬುರ್ಗಾ ತಾಲ್ಲೂಕಿನ ಲಿಂಗನಬಂಡಿ ಗ್ರಾಮದಲ್ಲಿ ರೂ. 9.23 ಕೋಟಿಗಳ ಅಂದಾಜು ವೆಚ್ಚದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲಾ ಸಂಕೀರ್ಣವನ್ನು ನಿರ್ಮಿಸಲು ತಯಾರಿಸಿರುವ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲಾ ಸಂಕೀರ್ಣವನ್ನು ರೂ. 9.17 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೊಪ್ಪಳ ಜಿಲ್ಲೆಯ ಯಲ್ಬುರ್ಗಾ ತಾಲ್ಲೂಕಿನ ಕುದುರೆಮೋತಿ ಗ್ರಾಮದಲ್ಲಿ ನಿರ್ಮಿಸಲು ತಯಾರಿಸಿರುವ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗಾಗಿ ಕೊಪ್ಪಳ ಜಿಲ್ಲೆಯ ಯಲ್ಬುರ್ಗಾ ತಾಲ್ಲೂಕಿನ ಬೆಳ್ಳೋಟಗಿ ಗ್ರಾಮದಲ್ಲಿ ರೂ. 9.98 ಕೋಟಿಗಳ ಅಂದಾಜು ವೆಚ್ಚದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲಾ ಸಂಕಿರ್ಣವನ್ನು ನಿರ್ಮಾಣ ಮಾಡಲು ತಯಾರಿಸಿರುವ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗಾಗಿ ಕೊಪ್ಪಳ ಜಿಲ್ಲೆ, ಕೊಪ್ಪಳ ತಾಲ್ಲೂಕು, ಕವಲೂರು ಗ್ರಾಮದಲ್ಲಿ ರೂ. 8.70 ಕೋಟಿಗಳ ಅಂದಾಜು ವೆಚ್ಚದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲಾ ಸಂಕೀರ್ಣ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

 ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗಾಗಿ ಕೊಪ್ಪಳ ಜಿಲ್ಲೆ, ಗಂಗಾವತಿ ತಾಲ್ಲೂಕು, ವಡ್ಡರಹಟ್ಟಿ (ಮಲಕನಕರಡಿ) ಗ್ರಾಮದಲ್ಲಿ ರೂ. 8.74 ಕೋಟಿಗಳ ಅಂದಾಜು ವೆಚ್ಚದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲಾ ಸಂಕೀರ್ಣ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗಾಗಿ ಕೊಪ್ಪಳ ಜಿಲ್ಲೆ, ಗಂಗಾವತಿ ತಾಲ್ಲೂಕು, ಹೆಮ್ಮಿಗುಡ್ಡ ಗ್ರಾಮದಲ್ಲಿ ರೂ. 8.57 ಕೋಟಿಗಳ ಅಂದಾಜು ವೆಚ್ಚದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲಾ ಸಂಕೀರ್ಣ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

 

ಜಲಸಂಪನ್ಮೂಲ ಇಲಾಖೆ


 ಬಳ್ಳಾರಿ, ಕೊಪ್ಪಳ ಮತ್ತು ಗದಗ ಜಿಲ್ಲೆಗಳ 2,65,229 ಎಕರೆ (48,381 ಎಕರೆ ಪ್ರದೇಶಕ್ಕೆ ಹರಿ ನೀರಾವರಿ ಮತ್ತು 2,16,848 ಎಕರೆ ಪ್ರದೇಶದಕ್ಕೆ ಸೂಕ್ಷ್ಮ ನೀರಾವರಿ) ನೀರಾವರಿ ಸೌಲಭ್ಯವನ್ನು ಒದಗಿಸಲು ಯೋಜಿಸಿರುವ ಸಿಂಗಟಾಲೂರು ಏತ ನೀರಾವರಿ ಯೋಜನೆಯ ರೂ.5768.04 ಕೋಟಿ ಮೊತ್ತದ ಪರಿಷ್ಕೃತ ವಿವರವಾದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.


ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ.


 ಹಾಸನ ಮತ್ತು ಹೊಸಪೇಟೆಯಲ್ಲಿ ಕ್ರಮವಾಗಿ ರೂ 29.37 ಕೋಟಿ ಮತ್ತು ರೂ 8.60 ಕೋಟಿ ವೆಚ್ಚದಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಗವರ್ನಮೆಂಟ್ ಟೂಲ್ ರೂಂ ಟ್ರ್ನೈನಿಂಗ್ ಸೆಂಟರ್) ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಹೈದ್ರಾಬಾದ ಕರ್ನಾಟಕ ಭಾಗದ ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಜಿ.ಟಿ.ಟಿ.ಸಿ. ಇಲ್ಲದೆ ಇರುವುದರಿಂದ ಅವುಗಳನ್ನೂ ಸ್ಥಾಪನೆ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

Advertisement

0 comments:

Post a Comment

 
Top