ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ
ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ನ.೧೫ ರಿಂದ ೧೭ ರವರೆಗೆ ಮೂರು ದಿನಗಳ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ನ.೧೫ ರಂದು ಬೆಳಿಗ್ಗೆ ೧೧ ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ನಲ್ಲಿ ಏರ್ಪಡಿಸಲಾಗಿರುವ ಜನತಾದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ ೫ ಗಂಟೆಗೆ ಕನಕಗಿರಿಗೆ ಆಗಮಿಸಿ ಇಲ್ಲಿನ ಕನಕಾಚಲಪತಿ ದೇವಸ್ಥಾನದ ಆವರಣದಲ್ಲಿ ಮಾತೃಭೂಮಿ ಯುವ ಶಕ್ತಿ ಸಂಘದ ವತಿಯಿಂದ ಜರುಗಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ರಾತ್ರಿ ೮.೪೫ ಕ್ಕೆ ಕಾರಟಗಿಗೆ ತೆರಳಿ ಸಾರ್ವಜನಿಕರ ಕುಂದುಕೊರತೆಗಳ ವಿಚಾರ ನಡೆಸಿ ವಾಸ್ತವ್ಯ ನಡೆಸುವರು. ನ.೧೬ ರಂದು ಬೆಳಿಗ್ಗೆ ೧೧ ಗಂಟೆಗೆ ಕರಡೋಣ ಗ್ರಾಮಕ್ಕೆ ಆಗಮಿಸಿ ಕನಕದಾಸ ಜಯಂತಿಯಲ್ಲಿ ಪಾಲ್ಗೊಳ್ಳುವರು. ಮ.೧ ಕ್ಕೆ ಉಮಳಿ ಕಾಟಾಪುರ್, ಕೆ.ಮಲ್ಲಾಪುರ ಗ್ರಾಮಗಳಲ್ಲಿ ಎಸ್.ಸಿ.ಪಿ./ಟಿ.ಎಸ್.ಪಿ. ಯೋಜನೆಯಡಿಯಲ್ಲಿ ರಸ್ತೆ ಕಾಮಗಾರಿ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವರು. ಮ.೨ ಕ್ಕೆ ಕರಡೋಣ ಗ್ರಾಮದಲ್ಲಿ ತಾಲೂಕ ಮಟ್ಟದ ಅಧಿಕಾರಿಗಳೊಂದಿಗೆ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಸಚಿವರು ಕಾರಟಗಿಗೆ ತೆರಳಿ ವಾಸ್ತವ್ಯ ಮಾಡುವರು. ನ.೧೭ ರಂದು ಬೆಳಿಗ್ಗೆ ೧೦.೩೦ ಕ್ಕೆ ಆಚಾರ ನರಸಾಪೂರ ಗ್ರಾಮದಲ್ಲಿ ಕನಕದಾಸ ಜಯಂತಿ, ಎಸ್.ಸಿ.ಪಿ./ಟಿ.ಎಸ್.ಪಿ. ಯೋಜನೆಯಡಿ ರಸ್ತೆ ಕಾಮಗಾರಿ ಅಡಿಗಲ್ಲು ಹಾಗೂ ವಾಲ್ಮೀಕಿ ಸಮುದಾಯ ಭವನ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸುವರು. ಮ.೩ ಕ್ಕೆ ಕೆ.ಡಿ. ನಗರ ಹಾಗೂ ಹಳೇ ಅಯೋಧ್ಯ ಗ್ರಾಮದಲ್ಲಿ ಸಿ.ಸಿ.ರಸ್ತೆ ಅಡಿಗಲ್ಲು ಸಮಾರಂಭದಲ್ಲಿ ಪಾಲ್ಗೊಂಡು ಕಾರಟಗಿಗೆ ತೆರಳಿ ವಾಸ್ತವ್ಯ ನಡೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.
0 comments:
Post a Comment