PLEASE LOGIN TO KANNADANET.COM FOR REGULAR NEWS-UPDATES

 ಕಾರ್ಖಾನೆ, ಬಾಯ್ಲರ್, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯು ವಿವಿಧ ಕೈಗಾರಿಕೆಗಳ ಸಹಯೋಗದೊಂದಿಗೆ ರಾಸಾಯನಿಕ ದುರಂತ ನಿವಾರಣೆ ದಿನವನ್ನು ಡಿ. ೦೪ ರಂದು ಗಿಣಿಗೇರಾದ ಮೆ: ಕಲ್ಯಾಣಿ ಸ್ಟೀಲ್ಸ್ ಲಿ. ಕಾರ್ಖಾನೆ ಆವರಣದಲ್ಲಿ ಹಮ್ಮಿಕೊಂಡಿದೆ.
  ಭೂಪಾಲ್ ದುರಂತದ ಹಿನ್ನೆಲೆಯಲ್ಲಿ ಪ್ರತಿವರ್ಷವೂ ಕೈಗಾರಿಕಾ ಕ್ಷೇತ್ರದಲ್ಲಿ ಡಿ.೦೪ ರಂದು ರಾಸಾಯನಿಕ ದುರಂತ ನಿವಾರಣಾ ದಿನ (ಕೆಮಿಕಲ್ ಡಿಸಾಸ್ಟರ್ ಪ್ರಿವೆನ್ಷನ್ ಡೇ) ಎಂದು ಆಚರಿಸಲಾಗುತ್ತಿದೆ.  ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ ೧೧ ಗಂಟೆಗೆ ಗಿಣಗೇರಿಯ ಕಲ್ಯಾಣಿ ಸ್ಟೀಲ್ಸ್ ಲಿಮಿಟೆಡ್ ಕಾರ್ಖಾನೆಯ ಆವರಣದಲ್ಲಿ ಸಭೆ ಹಾಗೂ ಆನ್-ಸೈಟ್ ಎಮರ್ಜನ್ಸಿ ಪ್ಲಾನ್ ಅಣಕು ಪ್ರದರ್ಶನವನ್ನು ಏರ್ಪಡಿಸಲಾಗಿದೆ.  ಜಿಲ್ಲಾಧಿಕಾರಿ ಆರ್.ಆರ್.ಜನ್ನು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ಟಿ.ಡಿ.ಪವಾರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿರುವರು ಎಂದು   ಬಳ್ಳಾರಿ ವಿಭಾಗದ ಕಾರ್ಖಾನೆಗಳ ಉಪನಿರ್ದೇಶಕರು  ತಿಳಿಸಿದ್ದಾರೆ.

Advertisement

0 comments:

Post a Comment

 
Top