PLEASE LOGIN TO KANNADANET.COM FOR REGULAR NEWS-UPDATES

  ಸರಕಾರಿ ಬಾಲಕರ ಬಾಲ ಮಂದಿರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯಲ್ಲಿರುವ ಸುಧಾರಣಾ ಸಂಸ್ಥೆಗಳ ನಿವಾಸಿಗಳಿಗಾಗಿ ಮಕ್ಕಳ ದಿನಾಚರಣೆಯನ್ನು ಶುಕ್ರವಾರದಂದು ಆಚರಿಸಲಾಯಿತು. 
  ಕಾರ್ಯಕ್ರಮವನ್ನು ನಗರಸಭೆ ಪೌರಾಯುಕ್ತ ರಮೇಶ ಪಟ್ಟೇದಾರ್ ನೆರ
ವೇರಿಸಿ ಮಾತನಾಡಿ, ಇಂದಿನ ಮಕ್ಕಳೇ ಇಂದಿನ ಪ್ರಜೆಗಳು, ಆದ್ದರಿಂದ ಭವ್ಯ ಭಾರತದ ಪ್ರಜೆಗಳಾದ ತಾವುಗಳು ಉತ್ತಮ ವಿದ್ಯಾಭ್ಯಾಸದೊಂದಿಗೆ ಸುಸಂಸ್ಕೃತ ನಡುವಳಿಕೆಯನ್ನು ಅರಿತು ಜೀವನದಲ್ಲಿ ಅಳವಡಿಸಿಕೊಂಡು ಜೀವನದಲ್ಲಿ ಯಶಸ್ವಿಯಾಗಿ ಎಂದು  ಕರೆ ನೀಡಿದರು. ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಡಿ.ಪಿ.ವಸಂತಪ್ರೇಮಾ ವಹಿಸಿ ಮಾತನಾಡಿ, ಪಂ.ಜವಾಹರ ಲಾಲ್ ನೆಹರುರವರ ಜನ್ಮ ದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದ್ದು, ಹಿರಿಯರು ತೋರಿಸಿದ ಸನ್ನಡತೆಯ ಹಾದಿಯಲ್ಲಿ ಸಾಗಿ ಅವರಂತೆ ಮಹಾನ ಚೇತನಗಳಾಗಿ ಎಂದು ಆಶಿಸಿದರು. ಕಾರ್ಯಕ್ರಮದಲ್ಲಿ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶಫೀ ಉಲ್ಲಾ, ರೋಟರಿ ಕ್ಲಬ್‌ನ ಅಧ್ಯಕ್ಷ ವೀರಣ್ಣ ಕಮತರ, ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆಯ ಹರೀಶ ಜೋಗಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮುನಿರಾಜಪ್ಪ, ಡಾ. ಕವಿತಾ ಹ್ಯಾಟಿ ಆಗಮಿಸಿದ್ದರು. ಮುನಿರಾಜಪ್ಪ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಸ್ತಾವಿಕವಾಗಿ ಮಾತನಾಡಿದರು, ಇಮಾಲಪ್ಪ ಡಿ.ಅಧೀಕ್ಷಕರು, ಬಾಲಕರ ಬಾಲಮಂದಿರ ಸ್ವಾಗತಿಸಿದರು. ರವಿಕುಮಾರ ಪವಾರ ಸಮಾಜ ಕಾರ್ಯಕರ್ತರು ನಿರೂಪಿಸಿದರು,  ರವಿ, ಆಪ್ತಸಮಾಲೋಚಕರು ವಂದಿಸಿದರು.  ಕಾರ್ಯಕ್ರಮದಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕದ ಸಿಬ್ಬಂದಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ಬಾಲಕರ ಬಾಲಮಂದಿರದ ಸಿಬ್ಬಂದಿಗಳು ಹಾಗೂ ಸರಕಾರಿ ಬಾಲಕರ, ಬಾಲಕಿಯರ ಬಾಲ ಮಂದಿರದ ಮತ್ತು ತೆರೆದ ತಂಗುದಾಣದ ಮಕ್ಕಳು ಭಾಗವಹಿಸಿದ್ದರು.

Advertisement

0 comments:

Post a Comment

 
Top