PLEASE LOGIN TO KANNADANET.COM FOR REGULAR NEWS-UPDATES

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದ ಉದ್ಘಾಟನೆ ಸಮಾರಂಭ ನ.೨೫ ರಂದು ಬೆಳಿಗ್ಗೆ ೧೦.೩೦ ಕ್ಕೆ ಜಿಲ್ಲಾ ಕ್ರೀಡಾಂಗಣದ ಅಡಿಟೋರಿಯಂ ಹಾಲ್‌ನಲ್ಲಿ ಜರುಗಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ ಎಸ್.ತಂಗಡಗಿ ಅವರು ನೆರವೇರಿಸುವರು. ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ, ಶರಣಪ್ಪ ಮಟ್ಟೂರು, ಅಮರನಾಥ ಪಾಟೀಲ್, ಜಿಲ್ಲಾ ಪಂಚಾಯತ ಉಪಾಧ್ಯಕ್ಷ ವಿನಯಕುಮಾರ ಎಂ.ಮೇಲಿನಮನಿ, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಚೆನ್ನಮ್ಮ ಹೇರೂರು, ಜಿ.ಪಂ.ಸಾಮಾಜಿಕ ಮತ್ತು ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ ತೋಟದ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ವಿದ್ಯಾಶ್ರೀ ಗಜೇಂದ್ರಗಡ, ನಗರಸಭೆ ಅಧ್ಯಕ್ಷೆ ಲತಾ ಸಂಡೂರ, ತಾ.ಪಂ.ಅಧ್ಯಕ್ಷೆ ವಿಶಾಲಾಕ್ಷಿ ಮಾಲಿಪಾಟೀಲ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ.ಅನಿಲ್‌ಕುಮಾರ, ಜಿಲ್ಲಾಧಿಕಾರಿ ಆರ್.ಆರ್.ಜನ್ನು, ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಟಿ.ಡಿ.ಪವಾರ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾಗರಾಜ ಜುಮ್ಮಣ್ಣನವರ ಸೇರಿದಂತೆ ಜಿ.ಪಂ, ತಾ.ಪಂ. ಹಾಗೂ ನಗರಸಭೆ ಸರ್ವ ಸದಸ್ಯರು ಆಗಮಿಸುವರು ಎಂದು ಜಿಲ್ಲಾ ಯುವಜನ ಸೇವಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಮಕೃಷ್ಣಯ್ಯ  ತಿಳಿಸಿದ್ದಾರೆ.

Advertisement

0 comments:

Post a Comment

 
Top