PLEASE LOGIN TO KANNADANET.COM FOR REGULAR NEWS-UPDATES

  ಕೊಪ್ಪಳ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕೆಲಸಕ್ಕಾಗಿ ಗುಳೆ ಹೋಗುವುದನ್ನು ನಿಯಂತ್ರಿಸಿ, ಉದ್ಯೋಗಖಾತ್ರಿ ಯೋಜನೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಗುಳೆ ತಡೆ ಅಭಿಯಾನವನ್ನು ನ. ೨೩ ರವರೆಗೆ ಆಯೋಜಿಸಲಾಗಿದ್ದು, ಗುಳೆ ತಡೆ ಅಭಿಯಾನ ರಥ ವಾ
ಹನಕ್ಕೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
  ನಂತರ ಮಾತನಾಡಿದ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಕೆಲಸವನ್ನು ಅರಸಿಕೊಂಡು, ಇತರೆ ಪ್ರದೇಶಗಳಿಗೆ ಗುಳೆ ಹೋಗುತ್ತಿರುವ ಬಗ್ಗೆ ವರದಿಗಳು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ, ಉದ್ಯೋಗ ಬಯಸಿ ಗುಳೆ ಹೋಗುವ ಬದಲಿಗೆ, ಉದ್ಯೋಗಖಾತ್ರಿ ಯೋಜನೆಯಲ್ಲಿ ಸ್ಥಳೀಯವಾಗಿ ಉದ್ಯೋಗ ಕೊಡಲಾಗುವುದು.  ಅಲ್ಲದೆ ಶೀಘ್ರ ಕೂಲಿ ಹಣ ಪಾವತಿಯ ಬಗ್ಗೆಯೂ ಗ್ರಾಮೀಣರಲ್ಲಿ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಗುಳೆ ತಡೆ ಅಭಿಯಾನವನ್ನು ತಾಲೂಕಿನಲ್ಲಿ ಪ್ರಾರಂಭಿಸಲಾಗಿದೆ.  ಸಾರ್ವಜನಿಕರಲ್ಲಿ ಅರಿವು ಮೂಡಿಸಲು ’ಗುಳೆ ತಡೆ ಅಭಿಯಾನ’ ರಥ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಸಂಚರಿಸಲಿದೆ.  ಗುಳೆ ತಡೆ ಅಭಿಯಾನ ರಥವು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಯಾ ಪಿಡಿಓ ಗಳು ಹಾಜರಿದ್ದು, ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರೊಟ್ಟಿಗೆ ಸಮನ್ವಯತೆಯಿಂದ, ಹೆಚ್ಚಿನ ಪ್ರಚಾರ ಒದಗಿಸಿ, ಗ್ರಾಮೀಣರಲ್ಲಿ ಗುಳೆ ತಡೆಯಲು ಮನವರಿಕೆ ಮಾಡಿಕೊಡಬೇಕು ಎಂದರು.
  ವ್ಯವಸ್ಥಾಪಕ ಸಂಗಮೇಶ ಪಾಟೀಲ, ಜಿಲ್ಲಾ ಸಂಯೋಜಕ ಶ್ರೀನಿವಾಸ ಚಿತ್ರಗಾರ, ಐಇಸಿ ಸಂಯೋಜಕ ದೇವರಾಜ ಪತ್ತಾರ, ಮಂಜುನಾಥ ಜವಳಿ, ಮಹೇಶ್ ಗೋರಂಟ್ಲಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

0 comments:

Post a Comment

 
Top