ಕೆಲವು ಕಂಪನಿಗಳು ತಯಾರಿಸಿರುವ ಔಷಧಿಗಳು ಕಳಪೆ ಗುಣಮಟ್ಟದ್ದಾಗಿವೆ ಎಂಬುದಾಗಿ ಔಷಧ ನಿಯಂತ್ರಣ ಇಲಾಖೆಯ ಔಷಧಿ ವಿಶ್ಲೇಷಕರು ಘೋಷಿಸಿರುವುದರಿಂದ, ಔಷಧ ವ್ಯಾಪಾರಿಗಳು, ಸಗಟು ಔಷಧ ಮಾರಾಟಗಾರರು, ವೈದ್ಯರು, ಆಸ್ಪತ್ರೆ ಮತ್ತು ನರ್ಸಿಂಗ್ ಹೋಂನವರು ಇಂತಹ ಔಷಧಿಯನ್ನು ದಾಸ್ತಾನು ಮಾಡುವುದಾಗಲೀ, ಮಾರಾಟ ಮಾಡುವುದಾಗಲೀ ಅಥವಾ ಉಪಯೋಗಿಸುವುದಾಗಲೀ ಮಾಡಬಾರದು. ಹಾಗೂ ಔಷಧದ ಹೆಸರು, ಬ್ಯಾಚ್ ಸಂಖ್ಯೆ ಹಾಗೂ ತಯಾರಕರ ಹೆಸರಿನ ಯಾವುದೇ ಔಷಧಿಗಳನ್ನು ವಿತರಿಸಬಾರದು ಎಂದು ಔಷಧ ನಿಯಂತ್ರಕರು ತಿಳಿಸಿದ್ದಾರೆ.
ಎಮ್-ಸ್ಟಾರ್-೨೦೦ (ಸ್ಪಾರಫ್ಲೋಕ್ಸಾಸಿನ್ ಟ್ಯಾಬ್ಲೆಟ್ಸ್) ಟಿ-೧೮೩, ಮೆ.ಆಸ್ಕರ್ ರೆಮಿಡೀಸ್, ಜೋಹ್ರೋನ ಅಡಜಾಯನಿಂಗ್ ಇಂಡಸ್ಟ್ರೀಯಲ್ ಏರಿಯ, ಕಾಲಾ-ಅಂಬ (ಹೆಚ್.ಪಿ.), ರೆಕ್ಸಿಡಿನ್, ಆರ್‌ಎಕ್ಯೂ೪ಹೆಚ್೩೩, ಮೆ.ಇಂಡೊಕೊ ರೆಮಿಡೀಸ್ ಲಿಮಿಟೆಡ್, ಬಿ-೨೦, ಎಮ್.ಐ.ಡಿ.ಸಿ. ಔರಂಗಾಬಾದ್-೪೩೧ ೧೩೬
ಈ ಔಷಧಿಗಳನ್ನು ಔಷಧ ವ್ಯಾಪಾರಿಗಳು, ಸಗಟು ಔಷಧ ಮಾರಾಟಗಾರರು, ವೈದ್ಯರು, ಆಸ್ಪತ್ರೆ ಮತ್ತು ನರ್ಸಿಂಗ್ ಹೋಂನವರು ದಾಸ್ತಾನು ಮಾಡುವುದಾಗಲೀ, ಮಾರಾಟ ಮಾಡುವುದಾಗಲೀ ಅಥವಾ ಉಪಯೋಗಿಸುವುದಾಗಲೀ ಮಾಡಬಾರದೆಂದು ಈ ಮೂಲಕ ಎಚ್ಚರಿಸಲಾಗಿದೆ. ಹಾಗೂ ಯಾರಾದರೂ ಈ ಔಷಧಿಗಳ ದಾಸ್ತಾನನ್ನು ಹೊಂದಿದ್ದಲ್ಲಿ, ಅಥವಾ ವಿತರಣೆ ಮಾಡುವುದು ಕಂಡುಬಂದಲ್ಲಿ ಕೂಡಲೇ ಸಂಬಂಧಪಟ್ಟ ಕ್ಷೇತ್ರದ ಔಷಧ ಪರಿವೀಕ್ಷಕರು ಅಥವಾ ಸಹಾಯಕ ಔಷಧ ನಿಯಂತ್ರಕರು- ೦೮೫೩೯-೨೨೧೫೦೧ ಕ್ಕೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳಲಾಗಿದೆ
0 comments:
Post a Comment