ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಸಹ ಜರುಗಲಿರುವ ದೇವಾಲಯಗಳ ಚಕ್ರವರ್ತಿಯ ಇಟಗಿ ಉತ್ಸವ ಡಿ.೧೯,೨೦ ಹಾಗೂ ೨೧ ರಂದು ಮೂರು ದಿನಗಳ ಕಾಲ ಜರುಗಲಿರುವ ಹಿನ್ನಲೆಯಲ್ಲಿ ಕೊಪ್ಪಳದ ವೇದಿಕೆಯ ಕಾರ್ಯಾಲಯದಲ್ಲಿ ಡಿ.೦೪ ರ ಗುರುವಾರ ಸಂಜೆ ೪ ಗಂಟೆಗೆ ಹಾಗೂ ಇಟಗಿ ದೇವಸ್ಥಾನದ ಆವರಣದಲ್ಲಿ ಡಿ.೦೫ ರ ಶುಕ್ರವಾರ ಬೆಳಿಗ್ಗೆ ೧೧ ಗಂಟೆಗೆ ಅಂತಿಮ ಪೂರ್ವಭಾವಿ ಸಭೆ ಜರುಗಲಿದೆ.
ಸಭೆಯಲ್ಲಿ ನಾಗರಿಕರ ವೇದಿಕೆಯ ಅಧ್ಯಕ್ಷ ಹಾಗೂ ಕಾರ್ಯಕ್ರಮ ಸಂಘಟಕ ಮಹೇಶಬಾಬು ಸುರ್ವೆ ಅವರ ಅಧ್ಯಕ್ಷತೆಯಲ್ಲಿ ಜರುಗಲಿರುವ ಈ ಸಭೆಯಲ್ಲಿ ಜಿಲ್ಲೆಯ ಆಸಕ್ತ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು, ಸಾಹಿತಿ ಮತ್ತು ಕವಿಗಳು ಈ ಎರಡು ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ತಮ್ಮ ಸಲಹೆ ಸೂಚನೆಗಳನ್ನು ನೀಡಿ ಸಭೆ ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯ ಮೂಲಕ ನಾಗರಿಕರ ವೇದಿಕೆ ಕಾರ್ಯದರ್ಶಿ ಎನ್.ಎಂ.ದೊಡ್ಡಮನಿ ಅವರು ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ.
0 comments:
Post a Comment