ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಡಿ. ೨೪ ರಂದು ಮಧ್ಯಾಹ್ನ ೩ ಗಂಟೆಗೆ ಕುಷ್ಟಗಿಯಲ್ಲಿ ಜನತಾದರ್ಶನ ನಡೆಸಿ, ಸಾರ್ವಜನಿಕರ ಕುಂದುಕೊರತೆ ಅಹವಾಲುಗಳನ್ನು ಆಲಿಸುವರು.
ಕುಷ್ಟಗಿ-ಕೊಪ್ಪಳ ರಸ್ತೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಸಮಾರಂಭದ ವೇದಿಕೆಯ ಪಕ್ಕದಲ್ಲಿ ಇದಕ್ಕಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರ ಅರ್ಜಿ ಸ್ವೀಕಾರ ಕೇಂದ್ರ ಅಂದು ಬೆಳಿಗ್ಗೆ ೧೦ ಗಂಟೆಯಿಂದಲೇ ಪ್ರಾರಂಭವಾಗಲಿದೆ. ಸಾರ್ವಜನಿಕರು ತಮ್ಮ ಕುಂದುಕೊರತೆ ಅರ್ಜಿಗಳನ್ನು ಅರ್ಜಿ ಸ್ವೀಕಾರ ಕೇಂದ್ರದಲ್ಲಿ ಸಲ್ಲಿಸಿ, ಸ್ವೀಕೃತಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ತಿಳಿಸಿದ್ದಾರೆ.
0 comments:
Post a Comment