PLEASE LOGIN TO KANNADANET.COM FOR REGULAR NEWS-UPDATES

ಹೆಚ್.ಐ.ವಿ. ಪೀಡಿತರ ಆರೋಗ್ಯ ಸುಧಾರಣೆಯಲ್ಲಿ ಜನಸಾಮಾನ್ಯರು ಹಾಗೂ ಸಂಸ್ಥೆಗಳು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು. ಅವರು ಶೋಷಣೆಗೆ ಒಳಗಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕೊಪ್ಪಳದ ಹಿರಿಯ ಸಿವಿಲ್ ನ್ಯಾಯಧೀಶರಾದ ಬಿ. ದಶರಥ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಬೆಂಗಳೂರು, ರೆಡ್ ರಿಬ್ಬನ್ ಕ್ಲಬ್‌ಗಳು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಹಳೆ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ವಿಶ್ವ ಏಡ್ಸ್ ದಿನಾಚರಣೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಹೆಚ್.ಐ.ವಿ. ಪೀಡಿತ ರೋಗಿಗಳು ಶೋಷಣೆಗೆ ಒಳಗಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಜನಸಾಮಾನ್ಯರ ಮೇಲಿದ್ದು,  ಹೆಚ್.ಐ.ವಿ. ಹರಡುವಿಕೆ ಹಾಗೂ  ಭವಿಷ್ಯದಲ್ಲಿ ಏಡ್ಸ್ ಅನ್ನು ಸಂಪೂರ್ಣ ನಿಯಂತ್ರಿಸುವ ನಿಟ್ಟಿನಲ್ಲಿ ನಾಗರಿಕ ಸಮುದಾಯ ಜಾಗೃತರಾಗಬೇಕೆಂದು ಹಿರಿಯ ಸಿವಿಲ್ ನ್ಯಾಯಧೀಶರಾದ ಬಿ.ದಶರಥ ಹೇಳಿದರು. 
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ|| ಎಸ್.ಬಿ.ದಾನರೆಡ್ಡಿ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಲಾ ಅಕಾಡೆಮಿ ಅಧ್ಯಕ್ಷೆ ಸಂಧ್ಯಾ ಬಿ.ಮಾದಿನೂರು, ಜಿಲ್ಲಾ ಸರ್ಕಾರಿ ವಕೀಲ ಬಿ.ಶರಣಪ್ಪ, ವಕೀಲರಾದ ಹನುಮಂತರಾವ್, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ|| ಬಿ.ಎಂ.ಪ್ರಭು, ಜಿಲ್ಲಾಸ್ಪತ್ರೆಯ ಎಆರ್‌ಟಿ ವೈದ್ಯಾಧಿಕಾರಿ ಡಾ|| ರೇಖಾ ಎಂ. ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಪಿಪಿಟಿಸಿಟಿ ಆಪ್ತ ಸಮಾಲೋಚಕ ಕೃಷ್ಣ ಅವರು ನಿರೂಪಿಸಿ ಕೊನೆಯಲ್ಲಿ ವಂದಿಸಿದರು. ಆಶಾ ಕಾರ್ಯಕರ್ತೆಯರು, ಮಂಗಳಮುಖಿಯರು, ಹೆಚ್.ಐ.ವಿ. ಪೀಡಿತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 
ಕಾರ್ಯಕ್ರಮಕ್ಕೂ ಮುನ್ನ ಹಳೆ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಹೆಚ್‌ಐವಿ/ ಏಡ್ಸ್ ಕುರಿತ ಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಶ್ರೀಕಾಂತ್ ಆರ್ ಬಾಸೂರ ಚಾಲನೆ ನೀಡಿದರು.   ಜಾಥಾ ಅಶೋಕ ವೃತ್ತ, ಜವಾಹರ ರಸ್ತೆ, ಗಡಿಯಾರಕಂಬ, ಡಾ|| ಸಿಂಪಿ ಲಿಂಗಣ್ಣ ರಸ್ತೆ, ಕೇಂದ್ರ ಬಸ್ ನಿಲ್ದಾಣದ ಮೂಲಕ ಹಳೇ ಜಿಲ್ಲಾ ಆಸ್ಪತ್ರೆಯಲ್ಲಿ ಸಮಾರೋಪಗೊಂಡಿತು. ಜಾಗೃತಿ ಜಾಥಾದಲ್ಲಿ ಕೆ

Advertisement

0 comments:

Post a Comment

 
Top