ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ ಎಸ್.ತಂಗಡಗಿ ಅವರು ನೆರವೇರಿಸುವರು. ಅಧ್ಯಕ್ಷತೆಯನ್ನು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರು, ಕೈಮಗ್ಗ ಅಭಿವೃದ್ದಿ ನಿಗಮದ ಅಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ, ಜಿ.ಪಂ. ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ನಗರಸಭೆ ಅಧ್ಯಕ್ಷೆ ಲತಾ ವೀರಣ್ಣ ಸಂಡೂರು, ತಾ.ಪಂ. ಅಧ್ಯಕ್ಷೆ ವಿಶಾಲಾಕ್ಷಿ ವಿ.ಪಾಟೀಲ್, ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ ಅನಿಲ್‌ಕುಮಾರ ಟಿ.ಕೆ., ಜಿಲ್ಲಾಧಿಕಾರಿ ಆರ್.ಆರ್. ಜನ್ನು, ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ಟಿ.ಡಿ.ಪವಾರ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾಗರಾಜ ಜುಮ್ಮಣ್ಣನವರ ಪಾಲ್ಗೊಳ್ಳುವರು.
ಸಮಾರೋಪ ಸಮಾರಂಭವು ಜ.೦೪ ರಂದು ಸಂಜೆ ೬ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಜರುಗಲಿದ್ದು, ಅಧ್ಯಕ್ಷತೆಯನ್ನು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾಗರಾಜ ಜುಮ್ಮಣ್ಣನವರ ವಹಿಸುವರು. ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಡಾ: ಸುರೇಶ ಬಿ.ಇಟ್ನಾಳ, ಸಹಾಯಕ ಆಯುಕ್ತ ಪಿ.ಎಸ್.ಮಂಜುನಾಥ, ಜಿ.ಪಂ.ಉಪಕಾರ್ಯದರ್ಶಿ ಎನ್.ಕೆ.ತೊರವಿ, ಜಿ.ಪಂ. ಮುಖ್ಯಲೆಕ್ಕಾಧಿಕಾರಿ ಟಿ.ಆರ್.ಶಿವಪ್ರಸಾದ, ಪೌರಾಯುಕ್ತ ರಮೇಶ ಪಟ್ಟೇದ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವಾಯ್.ಎಚ್.ಲಂಬು, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಶ್ರೀಕಾಂತ ಬಾಸೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಟಿ.ಕೊಟ್ರಪ್ಪ ಚೊರನೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ವಸಂತ ಪ್ರೇಮಾ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಪಿ.ಶುಭ, ಬಿಸಿಎಂ ಅಧಿಕಾರಿ ಬಿ.ಕಲ್ಲೇಶ ಸೇರಿದಂತೆ ಅನೇಕ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಟಿ.ರಾಮಕೃಷ್ಣಯ್ಯ ಅವರು ತಿಳಿಸಿದ್ದಾರೆ.
0 comments:
Post a Comment