
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತರ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಈಗಾಗಲೇ ಚುನಾವಣಾ ಗುರುತಿನ ಚೀಟಿ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಸಂಖ್ಯೆಯನ್ನು ಎಸ್.ಎಂ.ಎಸ್. ಮೂಲಕ ಕಳುಹಿಸಿದ್ದರೂ ಸಹ, ಪುನಃ ಆಧಾರ್ ಮತ್ತು ಎಪಿಕ್ ಸಂಖ್ಯೆಗಳನ್ನು ನೀಡುವುದು ಕಡ್ಡಾಯವಾಗಿರುತ್ತದೆ. ಪಡಿತರ ಚೀಟಿದಾರರು ಫೆಬ್ರುವರಿ ತಿಂಗಳಿನ ಪಡಿತರ ಆಹಾರಧಾನ್ಯ ಪಡೆಯುವ ಸಂದರ್ಭದಲ್ಲಿ ತಮ್ಮ ಚುನಾವಣಾ ಗುರುತಿನ ಚೀಟಿ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಸಂಖ್ಯೆಯ ಮಾಹಿತಿಯನ್ನು ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ತಪ್ಪದೆ ಸಲ್ಲಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವೈ.ಹೆಚ್. ಲಂಬು ತಿಳಿಸಿದ್ದಾರೆ.
0 comments:
Post a Comment