PLEASE LOGIN TO KANNADANET.COM FOR REGULAR NEWS-UPDATES

  ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಕ್ಕಳ ಹಬ್ಬ ಸಮಾರಂಭ ಜ.೨೪ ರಂದು ಬೆಳಿಗ್ಗೆ ೧೧ ಗಂಟೆಗೆ ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗಿದೆ. 
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ನೆರವೇರಿಸುವರು. ಅಧ್ಯಕ್ಷತೆಯನ್ನು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ, ಶರಣಪ್ಪ ಮಟ್ಟೂರು, ಅಮರನಾಥ ಪಾಟೀಲ್, ಕೈಮಗ್ಗ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ನಾಗಪ್ಪ, ಜಿ.ಪಂ. ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ದ್ರಾಕ್ಷಾಯಿಣಿ ಬಸವರಾಜ, ನಗರಸಭೆ ಅಧ್ಯಕ್ಷೆ ಲತಾ ವೀರಣ್ಣ ಸಂಡೂರು, ಜಿಲ್ಲಾಧಿಕಾರಿ ಆರ್.ಆರ್. ಜನ್ನು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಧಾರವಾಡ ಬಾಲವಿಕಾಸ ಅಕಾಡೆಮಿ ಯೋಜನಾಧಿಕಾರಿ ಮಾಲತಿ ಎಸ್.ಪೋಳ, ಸಹಾಯಕ ಆಯುಕ್ತ ಪಿ.ಎಸ್.ಮಂಜುನಾಥ, ಜಿಲ್ಲಾ ಬಾಲವಿಕಾಸ ಅಕಾಡೆಮಿ ಸದಸ್ಯರಾದ ಸಾವಿತ್ರಿ ಮುಜುಂದಾರ, ಶ್ರೀನಿವಾಸ ಚಿತ್ರಗಾರ, ಅರುಣಾ ನರೇಂದ್ರ ಪಾಟೀಲ್ ಸೇರಿದಂತೆ ಅನೇಕರು ಪಾಲ್ಗೊಳ್ಳುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಡಿ.ಪಿ. ವಸಂತ ಪ್ರೇಮ ಅವರು ತಿಳಿಸಿದ್ದಾರೆ.

Advertisement

0 comments:

Post a Comment

 
Top