ಕೊಪ್ಪಳ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಸಂಜೀವಿನಿ ಕಾರ್ಯಕ್ರಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೀದಿನಾಟಕ ಮತ್ತು ಕಲಾಜಾಥ ಹಮ್ಮಿಕೊಳ್ಳಲು ಅರ್ಹ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಲಾತಂಡದಲ್ಲಿ ಕನಿಷ್ಟ ೮ ಕಲಾವಿದರಿದ್ದು, ಅದರಲ್ಲಿ ೩-೪ ಮಹಿಳಾ ಕಲಾವಿದರಿರುವ ತಂಡಕ್ಕೆ ಆದ್ಯತೆ ನೀಡಲಾಗುವುದು. ತಂಡಗಳ ಆಯ್ಕೆಯನ್ನು ಜಿಲ್ಲಾ ಮಟ್ಟದಲ್ಲಿ ನಡೆಸಲಾಗುವುದು. ಆಯ್ಕೆಗಾಗಿ ತಂಡಗಳು ತಮ್ಮ ಸ್ವಂತ ಖರ್ಚಿನಲ್ಲಿ ಕಛೇರಿಗೆ ಹಾಜರಾಗಿ ಪ್ರತಿಭೆ ಪ್ರದರ್ಶಿಸಬೇಕು. ಕಲಾ ತಂಡವು ಜಿಲ್ಲಾ ನೋಂದಣಿ ಕಛೇರಿಯಲ್ಲಿ ನೋಂದಣಿಯಾಗಿ ಸುಮಾರು ೩ ವರ್ಷಗಳಾಗಿರಬೇಕು. ಈ ಕುರಿತು ಪ್ರಮಾಣ ಪತ್ರ ಲಗತ್ತಿಸಬೇಕು. ಕಲಾ ತಂಡವು ಬೀದಿನಾಟಕ/ಕಲಾಜಾಥವನ್ನು ಸರ್ಕಾರದ ವಿವಿಧ ಇಲಾಖೆಗಳಡಿ ಸುಮಾರು ೧೦ ಕಾರ್ಯಕ್ರಮ ನೀಡಿರುವ ಕುರಿತು ದಾಖಲೆಗಳನ್ನು ಸಲ್ಲಿಸಬೇಕು. ಕಲಾ ತಂಡದಲ್ಲಿರುವ ಸದಸ್ಯರ ವಿದ್ಯಾರ್ಹತೆ ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣ ಹೊಂದಿರಬೇಕು. ಇದಕ್ಕೆ ಪೂರಕವಾಗಿ ಪಟ್ಟಿ ಹಾಗೂ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಲಗತ್ತಿಸಬೇಕು. ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಕಛೇರಿ ವೇಳೆಯಲ್ಲಿ ಸಂಜೀವಿನಿ ಎನ್.ಆರ್.ಎಲ್.ಎಂ. ಶಾಖೆಯಲ್ಲಿ ಪಡೆಯಬಹುದಾಗಿದೆ. ಆಸಕ್ತ ಕಲಾತಂಡದವರು ತಮ್ಮ ಅರ್ಜಿಯನ್ನು ಫೆ.೦೩ ರೊಳಗಾಗಿ ಯೋಜನಾ ನಿರ್ದೇಶಕರು, ಜಿಲ್ಲಾ ಪಂಚಾಯತ್, ಕೊಪ್ಪಳ ಇವರಿಗೆ ಸಲ್ಲಿಸಬಹುದು ಎಂದು ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಅವರು ತಿಳಿಸಿದ್ದಾರೆ.
0 comments:
Post a Comment