PLEASE LOGIN TO KANNADANET.COM FOR REGULAR NEWS-UPDATES

  ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ವಾರದಲ್ಲಿ ೩ ದಿವಸ ಮೊಟ್ಟೆಗಳನ್ನು ವಿತರಿಸಲಾಗುತ್ತಿದ್ದು, ಇದಕ್ಕಾಗಿಯೇ ೧೫೦೦ ರೂ.ಗಳ ಅನುದಾನವನ್ನು ಆಯಾ ಅಂಗನವಾಡಿ ಕಾರ್ಯಕರ್ತೆಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಜಮಾ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ. ಉದಪುಡಿ ಅವರು ತಿಳಿಸಿದ್ದಾರೆ.
ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಮೊಟ್ಟೆಗಳನ್ನು ವಿತರಿಸುವ ಜವಾಬ್ದಾರಿಯನ್ನು ಆಯಾ ಅಂಗನವಾಡಿ ಕಾರ್ಯಕರ್ತೆಯರಿಗೆ ವಹಿಸಲಾಗಿದೆ.  ಮೊಟ್ಟೆಗಳನ್ನು ವಿತರಿಸುವ ಜಿಲ್ಲಾ ಪಂಚಾಯತಿಯಿಂದ ಪ್ರತಿ ತಿಂಗಳಿಗೆ ರೂ.೧೫೦೦/- ಗಳನ್ನು ಅಂಗನವಾಡಿ ಕಾರ್ಯಕರ್ತೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ.  ಪಾಲಕರು ತಮ್ಮ  ಮಕ್ಕಳಿಗೆ ಉತ್ತಮ ಗುಣಮಟ್ಟದ ಮೊಟ್ಟೆಗಳನ್ನು ವಾರದಲ್ಲಿ ೩ ಸಲ ನೀಡುತ್ತಿರುವ ಕುರಿತು ಖಾತ್ರಿಪಡಿಸಿಕೊಳ್ಳಬೇಕು. ನಿಯಮಿತವಾಗಿ ನಿಗದಿಪಡಿಸಿದ ದಿನಗಳಂದು ಮೊಟ್ಟೆಗಳನ್ನು ವಿತರಿಸುತ್ತಿರುವ ಕುರಿತು ಮಾಹಿತಿ ಪಡೆದುಕೊಳ್ಳಬೇಕು ಎಂದು  ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Advertisement

0 comments:

Post a Comment

 
Top