ಕನ್ನಡ ಪುಸ್ತಕ ಪ್ರಾಧಿಕಾರವು ವಿದ್ಯಾರ್ಥಿ ಯುವಜನರನ್ನು ಸಾಹಿತ್ಯಾಭಿರುಚಿಗೆ ಆಕರ್ಷಿಸಲು ಹಾಗೂ ಸಾಂಸ್ಕೃತಿಕ ಕ್ರಿಯಾಶೀಲತೆಯನ್ನು ಬೆಳೆಸಲು ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ಪುಸ್ತಕ ಪ್ರೇಮಿ ವಿದ್ಯಾರ್ಥಿ ಬಳಗ ರಚಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಕನಿಷ್ಟ ೫ ರಿಂದ ೧೫ ಮಂದಿ ವಿದ್ಯಾರ್ಥಿಗಳನ್ನೊಳಗೊಂಡಂತೆ ಕಾರ್ಯಕಾರಿ ಸಮಿತಿಯೊಂದನ್ನು ರಚಿಸಿಕೊಂಡು, ಆಯಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗಗಳ ಮುಖ್ಯಸ್ಥರ ಅನುಮೋದನೆಯೊಂದಿಗೆ ಅರ್ಜಿ ಸಲ್ಲಿಸಬಹುದು. ಕಾಲೇಜಿನಲ್ಲಿ ಸಾಂಸ್ಕೃತಿಕ ವಾತಾವರಣವನ್ನು ಕ್ರಿಯಾಶೀಲವಾಗಿಡುವ ನಿಟ್ಟಿನಲ್ಲಿ, ತಿಂಗಳಿಗೆ ಒಂದರಂತೆ ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಯನ್ನು ಈ ಬಳಗವು ಹಮ್ಮಿಕೊಳ್ಳುತ್ತದೆ. ಇದಕ್ಕಾಗಿ ಪ್ರಾಧಿಕಾರದಿಂದ ಕಾರ್ಯಕ್ರಮ ಒಂದಕ್ಕೆ ರೂ ೫೦೦೦/- ಗಳ ಗರಿಷ್ಟ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸಲಾಗುವುದು. ಇದಲ್ಲದೆ ಪ್ರಾಧಿಕಾರವು ಹಮ್ಮಿಕೊಳ್ಳುವ ಎಲ್ಲಾ ಯೋಜನೆ ಹಾಗೂ ಕಾರ್ಯಕ್ರಮಗಳಲ್ಲಿ ಈ ಪುಸ್ತಕ ಪ್ರೇಮಿ ವಿದ್ಯಾರ್ಥಿ ಬಳಗ ವನ್ನು ತೊಡಗಿಸಿಕೊಳ್ಳಲಾಗುವುದು.
ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಂದರೆ www.kannadapusthakapradhikara.comಅನ್ನು ಸಂಪರ್ಕಿಸಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಜ.೩೦ ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು - ೫೬೦೦೦೨, ಇವರಿಗೆ ಕಳುಹಿಸಿಕೊಡಬೇಕು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: ೦೮೦-೨೨೧೦೭೭೦೪ ಕ್ಕೆ ಸಂಪರ್ಕಿಸಬಹುದು
0 comments:
Post a Comment