ಕೊಪ್ಪಳ : ಸಂಸದ ಕರಡಿ ಸಂಗಣ್ಣನವರ ಕೂಕನಪಳ್ಳಿಯ ತೋಟದಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮವ್ವ(30) ಎನ್ನುವ ಮಹಿಳೆಯನ್ನು ಸಲಿಖೆಯಿಂದ ಹೊಡೆದು ಕೊಲೆ ಮಾಡಲಾಗಿದೆ. ಕೊಲೆಗೀಡಾದ ಲಕ್ಷ್ಮವ್ವಳ ಗಂಡ ಶರಣಪ್ಪನೇ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಕಳೆದ ಕೆಲವು ದಿನಗಳಿಂದ ಕೂಕನಪಳ್ಳಿಯ ತೋಟದಲ್ಲಿ ಕೆಲಸ ಮಾಡುತ್ತಿದ್ದ ಈ ಗಂಡ ಹೆಂಡತಿಯರ ನಡುವೆ ಜಗಳ ವಿಕೋಪಕ್ಕೆ ಹೋಗಿ ಬೆಳಗಿನ ಜಾವ ಸಲಿಖೆಯಿಂದ ಹೊಡೆದು ಕೊಂದಿದ್ದಾನೆ ಎನ್ನಲಾಗಿದೆ. ಗಂಡ ಶರಣಪ್ಪ ಯಲಬುರ್ಗಾ ತಾಲೂಕಿನ ತರಲಕಟ್ಟಿ ಗ್ರಾಮದವನು ಎನ್ನಲಾಗಿದೆ. ಕೊಲೆ ಮಾಡಿದ ನಂತರ 8 ವರ್ಷದ ತನ್ನ ಮಗನನ್ನು ಕರೆದುಕೊಂಡು ಪರಾರಿಯಾಗಿದ್ದಾನೆ. ಮುನಿರಾಬಾದ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Subscribe to:
Post Comments (Atom)
0 comments:
Post a Comment