PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ: ನಗರದ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕರಾದ ಮಂಜುನಾಥ ಬುಲ್ಟಿ ಹಾಗೂ ಸಿ.ಪಿ.ಎಸ್.ಶಾಲೆಯ ಶಿಕ್ಷಕರಾದ ಶಂಕ್ರಮ್ಮ ಬಂಗಾರಶೆಟ್ಟರ್‌ರವರಿಗೆ ಸರ್ಕಾರಿ ಅಂಗವಿಕಲ ನೌಕರರ ಸಂಘದ ವತಿಯಿಂದ ನೀಡಲಾಗುವ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಇತ್ತೀಚೆಗೆ ಕುಷ್ಟಗಿ ನಗರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ವಿಶ್ವ ಅಂಗವಿಕಲರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿತರಿಸಲಾಯಿತು.
  ಈ ಸಂದರ್ಭದಲ್ಲಿ ಕುಷ್ಟಗಿ ಕ್ಷೇತ್ರ ಶಾಸಕರಾದ ದೊಡ್ಡನಗೌಡ ಪಾಟೀಲ,ಮಾಜಿ ಶಾಸಕರಾದ ಕೆ.ಶರಣಪ್ಪ,ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ ಚಿಲವಾಡಗಿ,ರಾಜ್ಯ ಸಂಚಾಲಕರಾದ ಭರಮಪ್ಪ ಕಟ್ಟಿಮನಿ,ಜಿಲ್ಲಾಧ್ಯಕ್ಷರಾದ ಭರಮಪ್ಪ ಕಟ್ಟಿಮನಿ,ಜಿಲ್ಲಾಧ್ಯಕ್ಷರಾದ ಚನ್ನಬಸಪ್ಪ ಬೆಲ್ಲದ ಮುಂತಾದವರು ಹಾಜರಿದ್ದರು.

Advertisement

0 comments:

Post a Comment

 
Top