PLEASE LOGIN TO KANNADANET.COM FOR REGULAR NEWS-UPDATES

ಬೆಂಗಳೂರು,   : ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತ ಕನ್ನಡಿಗ  ರಿಖಿ ಕೇಜ್‌ಗೆ ರಾಜ್ಯ ಸರ್ಕಾರ 25 ಲಕ್ಷ ರೂ ನಗದು ಬಹುಮಾನ ಪ್ರಕಟಿಸಿದೆ.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ನಡೆದ ವಿಶೇಷ ಸಮಾರಂಭದಲ್ಲಿ  ರಿಖಿ ಕೇಜ್ ಅವರನ್ನು ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಿದ ನಂತರ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಈ ವಿಷಯವನ್ನು ಮಾಧ್ಯಮದವರಿಗೆ ತಿಳಿಸಿದರು.
ಬೆಂಗಳೂರಿನ ಬಿಷಪ್‌ಕಾಟನ್ ಶಾಲೆಯಲ್ಲಿ ವ್ಯಾಸಂಗ ಮಾಡಿ, ನಂತರ ಆಕ್ಸ್‌ವರ್ಡ್ ಮಹಾ ವಿದ್ಯಾಲಯದಲ್ಲಿ ದಂತ ವೈದ್ಯ ಪದವಿ ಪಡೆದು, ತದ ನಂತರ ಸಂಗೀತ ಕ್ಷೇತ್ರಕ್ಕೆ ತನ್ನನ್ನು ಸಂಪೂರ್ಣವಾಗಿ ಸಮರ್ಪಿಸಿಕೊಂಡ   ರಿಖಿ ಅವರ ಸಾಧನೆ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ, ಇಡೀ ಭಾರತಕ್ಕೇ ಹೆಮ್ಮೆ ತರುವಂತಹುದಾಗಿದೆ ಎಂದು ಮುಖ್ಯಮಂತ್ರಿ ಬಣ್ಣಿಸಿದರು.

Advertisement

0 comments:

Post a Comment

 
Top