ವಿಜಯಾಪುರ, ಫೆ ಟ್ರ್ಯಾಕ್ಟರ್‌ವೊಂದು ಪಲ್ಟಿ ಹೊಡೆದ ಪರಿಣಾಮ ಅದರಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗ್ಗೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಾಳಿಕೋಟೆ ಬಳಿಯ ನಾಗೂರಿನಲ್ಲಿ ಸಂಭವಿಸಿದೆ.
ಮೃತರನ್ನು ಉಳವವ್ವ ಬಿರಾದಾರ್(30), ನಾಯ್ಕೋಡಿ(40) ಹಾಗೂ ದಾನವ್ವ ಹಡಪದ್(27) ಎಂದು ಗುರುತಿಸಲಾಗಿದೆ. ಈ ವೇಳೆ ಟ್ರ್ಯಾಕ್ಟರ್‌ನಲ್ಲಿದ್ದ ಇತರ 8 ಮಂದಿ ಗಂಭೀರ ಗಾಯಗೊಂಡಿದ್ದು, ಗಾಯಾಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಈ ಘಟನೆಗೆ ಟ್ರ‍್ಯಾಕ್ಟರ್ ಚಾಲಕನ ಬೇಜವಾಬ್ದಾರಿಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ತಾಳಿಕೋಟೆ ಠಾಣಾ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
0 comments:
Post a Comment