PLEASE LOGIN TO KANNADANET.COM FOR REGULAR NEWS-UPDATES

  ಕನ್ನಡ ಪುಸ್ತಕ ಪ್ರಾಧಿಕಾರದಿಂದ ಚಾಮರಾಜನಗರ ಜಿಲ್ಲೆಯ ಪೇಟೆಶಾಲೆ ಮೈದಾನದಲ್ಲಿ ಫೆ.೧೧ ರಿಂದ ೧೫ ರವರೆಗೆ ಒಟ್ಟು ಐದು ದಿನಗಳ ಕಾಲ ರಿಯಾಯತಿ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಅರ್ಜಿ ಸಲ್ಲಿಸಲು ಫೆ.೦೩ ಕೊನೆಯ ದಿನವಾಗಿತ್ತು. ಪ್ರಕಾಶಕರು ಹಾಗೂ ಮಾರಾಟಗಾರರಿಗೆ ಮತ್ತೆ ಅವಕಾಶ ನೀಡುವ ದೃಷ್ಠಿಯಿಂದ ಮತ್ತೊಮ್ಮೆ ಫೆ.೦೫ ರವರೆಗೆ ಅವಧಿ ವಿಸ್ತರಿಸಲಾಗಿದೆ.
ಈ ಪುಸ್ತಕ ಮೇಳದಲ್ಲಿ ಪ್ರಕಾಶನ ಸಂಸ್ಥೆಗಳು/ಪ್ರದರ್ಶಕರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.೧,೫೦೦/- ಗಳ ಬಾಡಿಗೆ ಹಾಗೂ ರೂ.೧,೦೦೦/- ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಪ್ರತ್ಯೇಕವಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇವರ ಹೆಸರಿನಲ್ಲಿ ಸಲ್ಲಿಸಬಹುದು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಪ್ರದರ್ಶಕರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡಭವನ ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‌ಸೈಟ್ www.kannadapusthakapradhikara.com ನಲ್ಲಿ ಅರ್ಜಿಯನ್ನು ಉಚಿತವಾಗಿ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಫೆ.೦೫ ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರು-೫೬೦೦೦೨, ದೂರವಾಣಿ ಸಂಖ್ಯೆ: ೦೮೦-೨೨೪೮೪೫೧೬/೨೨೧೦೭೭೦೪ ಇವರನ್ನು ಸಂಪರ್ಕಿಸಬಹುದು .

Advertisement

0 comments:

Post a Comment

 
Top