ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕಲಬುರಗಿಯಲ್ಲಿ ಆಯೋಜಿಸಿದ್ದ ವಿಭಾಗ ಮಟ್ಟದ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾ. ೧೫ ಕ್ಕೆ ಮುಂದೂಡಲಾಗಿದೆ.
ಪ್ರಾಧಿಕಾರವು ಕಲಬುರಗಿ ವಿಭಾಗದ ಕನ್ನಡ ಮಾಧ್ಯಮ ಪ್ರಶಸ್ತಿ ಸಮಾರಂಭವನ್ನು ಫೆ. ೨೧ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಕಲಬುರಗಿಯ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಆಯೋಜಿಸಲು ದಿನಾಂಕವನ್ನು ನಿಗದಿಪಡಿಸಿತ್ತು. ಆದರೆ ಆ ಸಂದರ್ಭದಲ್ಲಿ ಪಿಯುಸಿ ಪರೀಕ್ಷೆಗಳು ಪ್ರಾರಂಭಗೊಳ್ಳಲಿರುವುದರಿಂದ, ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾ. ೧೫ ಕ್ಕೆ ಮುಂದೂಡಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಎಲ್. ಹನುಮಂತಯ್ಯ ತಿಳಿಸಿದ್ದಾರೆ.
0 comments:
Post a Comment