ಬೆಂಗಳೂರು, : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ವಿದೇಶಿ ವಿಶ್ವವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರವೇಶ ಹೊಂದಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಗರಿಷ್ಠ ರೂ 3.50 ಲಕ್ಷಗಳಂತೆ 3 ವರ್ಷದ ಅವಧಿಗೆ ಗರಿಷ್ಠ ರೂ 10.00 ಲಕ್ಷಗಳ ಬಡ್ಡಿ ರಹಿತ ಸಾಲ ಮಂಜೂರು ಮಾಡಲಾಗುವುದು.
ಅಭ್ಯರ್ಥಿಯು ಗರಿಷ್ಠ 35 ವರ್ಷಗಳ ವಯೋಮಿತಿಯಲ್ಲಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ವರಮಾನ ರೂ 1.44 ಲಕ್ಷಗಳನ್ನು ಮೀರಿರಬಾರದು. ಅರ್ಹತಾ ಪರೀಕ್ಷೆಯಲ್ಲಿ ಶೇ 60 ಕ್ಕಿಂತ ಹೆಚ್ಚಿನ ಅಂಕ ಗಳಿಸಿರಬೇಕು. ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಇಚ್ಫಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ಹಾಗೂ ಅರ್ಜಿ ನಮೂನೆಯನ್ನು ವೆಬ್‍ಸೈಟ್ www.karnataka.gov.in ನಲ್ಲಿ ಪಡೆಯಬಹುದಾಗಿದೆ.
0 comments:
Post a Comment