ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಮಂಡಿಸಿರುವ ಬಜೆಟ್ ಕುರಿತಂತೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಸಂಸದ ಸಂಗಣ್ಣ ಕರಡಿ ಅವರು, ಪ್ರಸಕ್ತ ಬಜೆಟ್‌ನಲ್ಲಿ ಕೃಷಿ, ಉದ್ಯೋಗ, ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ಕೊಟ್ಟು ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಉದ್ಯೋಗ ಸೃಷ್ಠಿಗಾಗಿ ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿ ಯೋಜನೆ, ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಯೋಜನೆಯಂತಹ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೊಳಿಸಿರುವುದು ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ. ಇದರಿಂದ ದೇಶದ ಮಾನವ ಅಭಿವೃದ್ಧಿ ಸೂಚ್ಯಂಕ ೮ ರಿಂದ ೮. ೨೫ಕ್ಕೆ ಹೆಚ್ಚಳವಾಗಲಿದೆ. ಈ ಬಾರಿಯ ಬಜೆಟ್‌ನಲ್ಲಿ ರಾಜ್ಯಕ್ಕೆ ಐಐಟಿ ಮಂಜೂರಾತಿ ನೀಡಲಾಗಿದೆ ಅಲ್ಲದೆ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿ ಯೋಜನೆಯಲ್ಲಿ ಐತಿಹಾಸಿಕ ಕ್ಷೇತ್ರವಾಗಿರುವ ಹಂಪಿಯನ್ನು ಸೇರ್ಪಡೆಗೊಳಿಸಿರುವುದು ಹರ್ಷವನ್ನು ಉಂಟುಮಾಡಿದೆ ಎಂದು ಸಂಸದ ಸಂಗಣ್ಣ ಕರಡಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Home
»
Government schemes projects
»
karnataka news information
»
koppal district information
»
Koppal News
» ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಬಜೆಟ್- ಸಂಗಣ್ಣ ಕರಡಿ
Advertisement
Subscribe to:
Post Comments (Atom)
0 comments:
Post a Comment