ಕೊಪ್ಪಳ ಜಿಲ್ಲಾ ಕೃಷಿ ಇಲಾಖೆಯ ಎನ್.ಇ.ಜಿ.ಪಿ-ಎ ಯೋಜನೆಯಡಿ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಒಪ್ಪಂದದ ಆಧಾರದ ಮೇಲೆ ೦೬ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
 	ಅರ್ಜಿ ಸಲ್ಲಿಸಲಿಚ್ಛಿಸುವವರು, ವಿದ್ಯಾರ್ಹತೆ, ಅನುಭವ, ವೇತನ ವಿವರ ಹಾಗೂ ಅರ್ಜಿ ನಮೂನೆಗಳನ್ನು ಕೊಪ್ಪಳ ಜಂಟಿ ಕೃಷಿ ನಿರ್ದೇಶಕರ ಕಛೇರಿಯಿಂದ ಅಥವಾ ರೈತ ಮಿತ್ರ ವೆಬ್‌ಸೈಟ್‌ನಿಂದ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ ೧೦ ಕೊನೆ ದಿನವಾಗಿದ್ದು, ಮಾರ್ಚ್ ೧೭ರ ಬೆಳಿಗ್ಗೆ ೧೧ ಗಂಟೆಗೆ ಸಂದರ್ಶನ ನಡೆಯಲಿದೆ. 
 	ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಕೊಪ್ಪಳ ದೂರವಾಣಿ ಸಂಖ್ಯೆ: ೦೮೫೩೯-೨೨೧೬೩೩ ಕ್ಕೆ ಸಂಪರ್ಕಿಸಬಹುದಾಗಿದೆ  .
 
0 comments:
Post a Comment