ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಎರಡನೆ ಹಂತದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮೊದಲ ಹಂತದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಕಳೆದ ಜ. ೧೮ ರಿಂದ ೨೧ ರವರೆಗೆ ೦೪ ದಿನಗಳ ಕಾಲ ಹಮ್ಮಿಕೊಳ್ಳಲಾಗಿತ್ತು. ಶೇ. ೧೦೧. ೭೪ ರಷ್ಟು ಉತ್ತಮ ಸಾಧನೆ ಮಾಡಲಾಗಿದೆ. ಇದೀಗ ಫೆ. ೨೨ ರಿಂದ ಎರಡನೆ ಹಂತದ ಪಲ್ಸ್‌ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ೦೫ ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗುವುದು. ಜಿಲ್ಲೆಯ ೧೯೯೨೮೪ ಮಕ್ಕಳು ಇದರ ಪ್ರಯೋಜನ ಪಡೆದುಕೊಳ್ಳಲಿದ್ದಾರೆ. ಆ ಪೈಕಿ ೧೬೮೦೩೨ ಮಕ್ಕಳು ಗ್ರಾಮಾಂತರ ಪ್ರದೇಶದವರಾಗಿದ್ದು, ೩೧೨೫೨ ಮಕ್ಕಳು ನಗರ ಪ್ರದೇಶದವರಾಗಿದ್ದಾರೆ. ಮಕ್ಕಳಿಗೆ ಪೋಲಿಯೋ ಹನಿ ನೀಡುವ ಸಲುವಾಗಿ ಒಟ್ಟು ೨೮೮೧೫೧ ಮನೆಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಈ ಪೈಕಿ ಗ್ರಾಮೀಣ ಪ್ರದೇಶದ ೨೩೯೯೪೩ ಮನೆಗಳು ಹಾಗೂ ನಗರ ಮತ್ತು ಪಟ್ಟಣ ಪ್ರದೇಶದ ೪೮೨೦೮ ಮನೆಗಳ ಭೇಟಿಗೆ ಗುರಿ ಹೊಂದಲಾಗಿದೆ. ಫೆ ೨೨ ರಂದು ಬೂತ್ ಮಟ್ಟದಲ್ಲಿ ಮಕ್ಕಳಿಗೆ ಲಸಿಕೆ ನೀಡಲು ಒಟ್ಟು ೧೭೬೮ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಫೆ. ೨೩ ರಿಂದ ೨೫ ರವರೆಗೆ ಮನೆ ಮನೆಗಳಿಗೆ ಭೇಟಿ ನೀಡಿ ಉಳಿಕೆ ಮಕ್ಕಳಿಗೆ ಪೋಲಿಯೋ ಹನಿ ನೀಡಲಾಗುವುದು. ಬಸ್ ನಿಲ್ದಾಣ, ರೈಲು ನಿಲ್ದಾಣ, ಸಂತೆ, ಜಾತ್ರೆಗಳಲ್ಲಿ ವಿಶೇಷ ಬೂತ್‌ಗಳನ್ನು ಸ್ಥಾಪಿಸಿ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗುವುದು. ಅಲ್ಲದೆ ಕಾರ್ಖಾನೆ ಮತ್ತು ಕಟ್ಟಡ ನಿರ್ಮಾಣ, ಇಟ್ಟಿಗೆ ಭಟ್ಟಿ ಪ್ರದೇಶಗಳಲ್ಲಿ ವಾಸ್ತವ್ಯ ಹೂಡಿರುವ ಕಾರ್ಮಿಕರ ಮಕ್ಕಳಿಗೂ ಸಹ ಪೋಲಿಯೋ ಲಸಿಕೆ ನೀಡಿಕೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಫೆ. ೨೨ ಭಾನುವಾರ ಇದ್ದರೂ ಕೂಡ ಅಂದು ಎಂದಿನಂತೆ ಶಾಲೆಗಳು ಕಾರ್ಯನಿರ್ವಹಿಸಬೇಕು. ಎಲ್ಲ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಕಡ್ಡಾಯವಾಗಿ ಹಾಜರಿದ್ದು, ಕರ್ತವ್ಯ ನಿರ್ವಹಿಸುವಂತೆ ಆದೇಶಿಸಲಾಗಿದೆ. ಪಾಲಕರು ೦೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಬೇಕು. ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ಶಿಕ್ಷಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಗುಂಪುಗಳು, ಲಯನ್ಸ್, ರೋಟರಿ, ಇನ್ನರ್ ವ್ಹೀಲ್ ಹಾಗೂ ಇತರೆ ಸ್ವಯಂ ಸೇವಾ ಸಂಸ್ಥೆಗಳು ಕೈಜೋಡಿಸಿ ಈ ರಾಷ್ಟ್ರೀಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಮನೆ ಮನೆ ಭೇಟಿ ಕಾರ್ಯಕ್ರಮವನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮ ಕುರಿತು ಗ್ರಾಮಗಳಲ್ಲಿ ಡಂಗುರ ಸಾರುವುದು, ಮಕ್ಕಳಿಂದ ಪ್ರಬಾತ ಫೇರಿ, ಜಾಥಾ ಏರ್ಪಡಿಸುವುದು ಹಾಗೂ ಘೋಷಣೆಗಳನ್ನು ಕೂಗುವ ಮೂಲಕ ಹೆಚ್ಚಿನ ಪ್ರಚಾರ ಒದಗಿಸಬೇಕು. ಜೆಸ್ಕಾಂ ನವರು ಪೋಲಿಯೋ ಲಸಿಕೆಯ ದಾಸ್ತಾನು ಮತ್ತು ವಿತರಣೆಗೆ ಅನುಕೂಲವಾಗುವಂತೆ ಫೆ. ೨೦ ರಿಂದ ೨೬ ರವರೆಗೆ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು. ಒಟ್ಟಾರೆಯಾಗಿ ಜಿಲ್ಲೆಯ ಯಾವುದೇ ಪ್ರದೇಶದಲ್ಲಿನ ೫ ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ್ ಬಾಸೂರ ಅವರು ಹೇಳಿದರು.
ಬಳ್ಳಾರಿ ಸರ್ವೆಲೆನ್ಸ್ ಮೆಡಿಕಲ್ ಅಧಿಕಾರಿ ಡಾ. ಆರ್.ಎಸ್. ಶ್ರೀಧರ್, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ: ರಮೇಶ್ ಮೂಲಿಮನಿ, ಡಿಡಿಪಿಐ ಶ್ಯಾಮಸುಂದರ್, ತಹಸಿಲ್ದಾರ್ ಪುಟ್ಟರಾಮಯ್ಯ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ರೋಟರಿ, ಇನ್ನರ್ ವ್ಹೀಲ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

0 comments:
Post a Comment