PLEASE LOGIN TO KANNADANET.COM FOR REGULAR NEWS-UPDATES

 ಕೊಪ್ಪಳದ ಎಸ್ಸಿಎಸ್ಟಿ ಹಾಸ್ಟೆಲ್‌ನಲ್ಲಿ ಘಟನೆ
 ಕೊಪ್ಪಳ :  ಹಲ್ಲಿ ಬಿದ್ದಿದ್ದ ಸಾಂಬಾರ್ ಸೇವಿಸಿದ ಪರಿಣಾಮ ೨೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ಕೊಪ್ಪಳದ ಮೆಟ್ರಿಕ್ ನಂತರದ ಎಸ್ಸಿ ಎಸ್ಟಿ ಹಾಸ್ಟೆಲ್‌ನಲ್ಲಿ ನಡೆದಿದೆ. ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿರುವ ಮೆಟ್ರಿಕ್ ನಂತರದ ಎಸ್ಸಿಎಸ್ಟಿ ಹಾಸ್ಟೆಲ್‌ನಲ್ಲಿ ಇಂದು ಮಧ್ಯಾಹ್ನ ಎಂದಿನಂತೆ ವಿದ್ಯಾರ್ಥಿಗಳು ಊಟಕ್ಕೆ ಕುಳಿತುಕೊಂಡಿದ್ದಾಗ ವಿದ್ಯಾರ್ಥಿಯೊಬ್ಬನ ತಟ್ಟೆಯಲ್ಲಿ ಸತ್ತು ಬಿದ್ದಿ ಹಲ್ಲಿ ಪತ್ತೆಯಾಗಿದೆ. 
     ಸುಮಾರು ೧೩೦ ವಿದ್ಯಾರ್ಥಿಗಳಿರುವ ಈ ಹಾಸ್ಟೆಲ್‌ನಲ್ಲಿ ಇಂದು ಮಧ್ಯಾಹ್ನ ೩೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೊದಲು ಊಟಕ್ಕೆ ಕುಳಿತಿದ್ದರು. ರೊಟ್ಟಿಯ ಜೊತೆಗೆ ಸಾಂಬಾರ್ ಬಡಿಸಿಕೊಂಡು ಊಟ ಮಾಡುತ್ತಿರುವಾಗ ವಿದ್ಯಾರ್ಥಿಯೊಬ್ಬನ ತಟ್ಟೆಯಲ್ಲಿ ಹಲ್ಲಿ ಪತ್ತೆಯಾಗಿರೋದನ್ನು ಕಂಡು ಊಟ ಮಾಡುತ್ತಿದ್ದ ಎಲ್ಲ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ. ಅಲ್ಲದೆ, ೨೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ಕೂಡಲೇ ಹಾಸ್ಟೆಲ್‌ನ ಸಿಬ್ಬಂದಿ ಎಲ್ಲ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ವಿಷಯ ತಿಳದು ಸಂಸದ ಸಂಗಣ್ಣ ಕರಡಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ರು. ಈಗ ವಿದ್ಯಾರ್ಥಿಗಳು ಚೇತರಿಸಿಕೊಳ್ತಿದ್ದಾರೆ. ಅಡುಗೆ ಮಾಡುವವರ ಕಣ್ತಪ್ಪಿನಿಂದಾಗಿರುವ ಈ ಘಟನೆಯಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಳ್ಳುವುದರ ಜೊತೆಗೆ ಆತಂಕಕ್ಕೆ ಕಾರಣವಾಯ್ತು. ಇನ್ನಾದ್ರೂ ಅಡುಗೆ ಮಾಡುವವರು ಜವಾಬ್ದಾರಿಯಿಂದ ಇರಬೇಕು ಎಂಬುದು ವಿದ್ಯಾರ್ಥಿಗಳ ಆಗ್ರಹವಾಗಿದೆ.

Advertisement

0 comments:

Post a Comment

 
Top