ಉದ್ಯೋಗ ಮತ್ತು ತರಬೇತಿ ಇಲಾಖೆಯಿಂದ ಯಲಬುರ್ಗಾ ತಾಲೂಕು ಕುಕನೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಗಳಿಗೆ ಶಿಶಿಕ್ಷು ತರಬೇತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಫೆ.೦೭ ರಂದು ಬೆಳಿಗ್ಗೆ ೧೦ ಕ್ಕೆ ಏರ್ಪಡಿಸಲಾಗಿದೆ.
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ (ಲಿ) ಬೇವಿನಾಳ ಕಂಪನಿಯವರು ಫಿಟ್ಟರ್, ಎಲೆಕ್ಟ್ರೀಷಿಯನ್, ಟರ್ನರ್, ವೆಲ್ಡರ್ ಮತ್ತು ಡಿಸೈಲ್ ಮೆಕ್ಯಾನಿಕ್ ವೃತ್ತಿಯಲ್ಲಿ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಶಿಶಿಕ್ಷು ತರಬೇತಿಗಾಗಿ ಆಯ್ಕೆ ಮಾಡಲು ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಗಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಬಯೋಡಾಟ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ವಿದ್ಯಾರ್ಹತೆಯ ಪ್ರಮಾಣ ಪತ್ರಗಳೊಂದಿಗೆ ಹಾಜರಾಗಬಹುದಾಗಿದೆ ಎಂದು ಕುಕನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
0 comments:
Post a Comment