ವಿಜಯನಗರ ಸಾಮ್ರಾಜ್ಯದ ವೈಭವವನ್ನು ಬಿಂಬಿಸುವ ರೀತಿಯಲ್ಲಿ ಕನಕಗಿರಿ ಉತ್ಸವ ಫೆ. ೨೩ ಮತ್ತು ೨೪ ರಂದು ಕನಕಗಿರಿಯಲ್ಲಿ ವಿಜೃಂಭಣೆಯಿಂದ ಜರುಗಲಿದ್ದು, ಉತ್ಸವ ಅಂಗವಾಗಿ ಕವಿಗೋಷ್ಠಿ, ಕೃಷಿ ಉತ್ಸವ, ಫಲಪುಷ್ಪ ಪ್ರದರ್ಶನ, ವಿವಿಧ ವಸ್ತುಪ್ರದರ್ಶನ ಸೇರಿದಂತೆ ಹತ್ತು ಹಲವು ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಹೇಳಿದರು.
ಕನಕಗಿರಿಯಲ್ಲಿ ಕನಕಗಿರಿ ಉತ್ಸವ ನಿಮಿತ್ಯ ಶುಕ್ರವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾಧಿಕಾರಿ ಆರ್.ಆರ್. ಜನ್ನು, ಜಿ.ಪಂ. ಸದಸ್ಯ ವೀರೇಶ್ ಸಮಗಂಡಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಅಪರ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್, ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ್, ಡಿವೈಎಸ್‌ಪಿ ವಿನ್ಸಂಟ್ ಶಾಂತಕುಮಾರ್ ಸೇರಿದಂತೆ ಹಲವು ಜನಪ್ರತಿನಿಧಿಗಳು, ಊರಿನ ಗಣ್ಯರು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಸಭೆಗೂ ಪೂರ್ವದಲ್ಲಿ ಕನಕಗಿರಿ ಉತ್ಸವ ನಡೆಸಲು ನಿರ್ಮಿಸಲಾಗುತ್ತಿರುವ ಪ್ರಮುಖ ವೇದಿಕೆಗೆ ಭೇಟಿ ನೀಡಿ ಸಿದ್ಧತೆಗಳನ್ನು ಸಚಿವರು ಪರಿಶೀಲಿಸಿದರು.
ಕನಕಗಿರಿ ಉತ್ಸವ : ಫೆ. ೨೧ ರಿಂದ ಕ್ರೀಡಾಕೂಟಗಳು ಪ್ರಾರಂಭ- ಶಿವರಾಜ ತಂಗಡಗಿ
ಈ ಬಾರಿಯ ಕನಕಗಿರಿ ಉತ್ಸವ ಫೆ. ೨೩ ಮತ್ತು ೨೪ ರಂದು ಕನಕಗಿರಿಯಲ್ಲಿ ವಿಜೃಂಭಣೆಯಿಂದ ಜರುಗಲಿದ್ದು, ಇದಕ್ಕೆ ಪೂರಕವಾಗಿ ಗ್ರಾಮೀಣ ಕ್ರೀಡಾಕೂಟಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಫೆ. ೨೧ ರಿಂದಲೇ ಕ್ರೀಡಾಕೂಟಗಳು ಪ್ರಾರಂಭವಾಗಲಿವೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಹೇಳಿದರು.
ಕನಕಗಿರಿಯಲ್ಲಿ ಕನಕಗಿರಿ ಉತ್ಸವ ನಿಮಿತ್ಯ ಶುಕ್ರವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕನಕಗಿರಿ ಉತ್ಸವದ ಅಂಗವಾಗಿ ವಿವಿಧ ಕ್ರೀಡಾಕೂಟಗಳು ಫೆ. ೨೧ ರಿಂದಲೇ ಪ್ರಾರಂಭವಾಗಲಿದ್ದು, ಕನಕಗಿರಿಯ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಇದೇ ಪ್ರಥಮ ಬಾರಿಗೆ ಹೊನಲು ಬೆಳಕಿನಲ್ಲಿ ಫೆ. ೨೧ ರಂದು ಸಂಜೆ ೪ ಗಂಟೆಗೆ ವಾಲಿಬಾಲ್ ಮತ್ತು ಫೆ. ೨೨ ರಂದು ಸಂಜೆ ಕಬಡ್ಡಿ ಪಂದ್ಯಾವಳಿಯನ್ನು ಪುರುಷರಿಗೆ ಮತ್ತು ಮಹಿಳೆಯರಿಗೆ ಆಯೋಜಿಸಲಾಗಿದೆ. ಪುರುಷರಿಗೆ ವಾಲಿಬಾಲ್, ಕಬಡ್ಡಿ, ಮಲ್ಲಕಂಬ ಹಾಗೂ ಕುಸ್ತಿ ಪಂದ್ಯಗಳನ್ನು ಆಯೋಜಿಸಲಾಗಿದೆ. ಮಹಿಳೆಯರಿಗೆ ವಾಲಿಬಾಲ್, ಕಬಡ್ಡಿ, ಮಲ್ಲಕಂಬ ಹಾಗೂ ರಂಗೋಲಿ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ರಂಗೋಲಿ ಸ್ಪರ್ಧೆ ಫೆ. ೨೩ ರಂದು ಬೆಳಿಗ್ಗೆ ೮-೩೦ ಗಂಟೆಗೆ ಕನಕಗಿರಿ ಜೂನಿಯರ್ ಕಾಲೇಜಿನಲ್ಲಿ ಹಾಗೂ ಕುಸ್ತಿ ಪಂದ್ಯಗಳು ಫೆ. ೨೪ ರಂದು ಬೆಳಿಗ್ಗೆ ೯ ರಿಂದ ನಡೆಯಲಿದೆ. ರಾಜ್ಯದ ಇತರೆ ಭಾಗಗಳಿಂದ ಬರುವ ಕ್ರೀಡಾಪಟುಗಳಿಗೆ ಸಮರ್ಪಕ ವಸತಿ ಹಾಗೂ ಊಟದ ವ್ಯವಸ್ಥೆಯನ್ನು ಕಲ್ಪಿಸಬೇಕು. ಕ್ರೀಡಾ ಕೂಟದ ಯಶಸ್ವಿಗೆ ಅಗತ್ಯ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಆರ್. ಜನ್ನು, ಜಿ.ಪಂ. ಸದಸ್ಯ ವೀರೇಶ್ ಸಮಗಂಡಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಅಪರ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್, ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ್, ಡಿವೈಎಸ್‌ಪಿ ವಿನ್ಸಂಟ್ ಶಾಂತಕುಮಾರ್ ಸೇರಿದಂತೆ ಹಲವು ಜನಪ್ರತಿನಿಧಿಗಳು, ಊರಿನ ಗಣ್ಯರು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
0 comments:
Post a Comment