ಕೊಪ್ಪಳ, ಫೆ. : ಕೃಷಿ ಇಲಾಖೆಯ ಆತ್ಮ ಯೋಜನೆ ವತಿಯಿಂದ ನೀಡಲಾಗುವ ಜಿಲ್ಲಾಮಟ್ಟದ ಹಾಗೂ ತಾಲೂಕಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಮಾ. ೧೦ ಕೊನೆಯ ದಿನವಾಗಿದೆ.
ಕೃಷಿ ಹಾಗೂ ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳಡಿ ಉತ್ತಮ ಸಾಧನೆಗೈದ ಪ್ರಗತಿಪರ ರೈತರಿಗೆ ನೀಡಲಾಗುವ ಈ ಪ್ರಶಸ್ತಿಗೆ ಕೊಪ್ಪಳ ಜಿಲ್ಲೆಯಿಂದ ೧೦ ಪ್ರಗತಿಪರ ರೈತರನ್ನು ಹಾಗೂ ಜಿಲ್ಲೆಯ ಪ್ರತಿ ತಾಲೂಕಿನ ಐದು ಪ್ರಗತಿಪರ ರೈತರನ್ನು ಆಯ್ಕೆ ಮಾಡಲಾಗುವುದು. ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯುವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಇತ್ಯಾದಿ ಸಾಕಾಣಿಕೆ ಚಟುವಟಿಕೆಗಳಲ್ಲಿ ಸಾಧನೆಗೈದ ರೈತರು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಗಳು ಲಭ್ಯವಿದ್ದು, ರೈತರು ಭರ್ತಿ ಮಾಡಿದ ಅರ್ಜಿಗಳನ್ನು ಮಾರ್ಚ್ ೧೦ ರ ಸಾಯಂಕಾಲ ೫.೩೦ ರೊಳಗಾಗಿ ಸಂಬಂಧಪಟ್ಟ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಬೇಕು .
0 comments:
Post a Comment