ಕೊಪ್ಪಳ ಫೆ. ೨೧ : ಕೊಪ್ಪಳ, ಬಳ್ಳಾರಿ ಮತ್ತು ಗದಗ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿರುವ ಹುಬ್ಬಳ್ಳಿ-ಕಲಬುರಗಿ ಹೊಸ ಪ್ಯಾಸೆಂಜರ್ ಅಥವಾ ಎಕ್ಸ್‌ಪ್ರೆಸ್ ರೈಲನ್ನು ಪ್ರಸಕ್ತ ರೈಲ್ವೆ ಬಜೆಟ್‌ನಲ್ಲಿ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ತಿಳಿಸಿದ್ದಾರೆ.
ಹುಬ್ಬಳ್ಳಿ-ಕಲಬುರಗಿ ಹೊಸ ರೈಲು ಸಂಚಾರ ಪ್ರಾರಂಭವಾದಲ್ಲಿ, ಬಳ್ಳಾರಿ, ಗದಗ, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಪ್ರಸಕ್ತ ರೈಲ್ವೆ ಮುಂಗಡ ಪತ್ರದಲ್ಲಿ ಹೊಸ ರೈಲನ್ನು ಘೋಷಿಸುವಂತೆ ಸಂಸದ ಸಂಗಣ್ಣ ಕರಡಿ ಅವರು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

0 comments:
Post a Comment