ಬೆಂಗಳೂರು, : ರಾಜ್ಯದಲ್ಲಿ ಮತ್ತೆ ಲಾಟರಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿಗೆ ತರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಗುರುವಾರ ವಿಧಾನ ಪರಿಷತ್ತಿನಲ್ಲಿ ಸದಸ್ಯರಾದ ಬಸವರಾಜ ಹೊರಟ್ಟಿ ಅವರ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಯವರು ಈ ಸಂಬಂಧ ರಾಜ್ಯ ಯೋಜನಾ ಮಂಡಳಿಯಿಂದ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದರು.ಲಾಟರಿ ಯೋಜನೆಯಿಂದ ಬರುವ ಹಣವನ್ನು ರಾಜ್ಯದಲ್ಲಿ ಆರೋಗ್ಯ ಕಾಯಕ್ರಮಕ್ಕೆ ಬಳಸಿಕೊಳ್ಳುವಂತ ಸ್ಥಿತಿ ಸರ್ಕಾರಕ್ಕೆ ಬಂದಿಲ್ಲ ಎಂದ ಮುಖ್ಯಮಂತ್ರಿ ಅವರು ಜನರ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರಲು ಸರ್ಕಾರಕ್ಕೆ ಹಣಕಾಸಿನ ಸಮಸ್ಯೆ ಇಲ್ಲದಿರುವುದರಿಂದ ಯಾವುದೇ ಕಾರಣಕ್ಕೂ ಮತ್ತೊಮ್ಮೆ ಲಾಟರಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದರು
0 comments:
Post a Comment