ಬೆಂಗಳೂರು, ಮಾರ್ಚ್ 7: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕೈಗೊಳ್ಳಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಜನಗಣತಿಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ತೀವ್ರ ಪ್ರಚಾರಾಂದೋಲನವನ್ನು ಕೈಗೊಳ್ಳಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದಶಿಗಳಾದ ಡಾ: ಶಾಲಿನಿ ರಜನೀಶ್ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿಗಳಿಗೆ ಸೂಚಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಸಾಮಾನತೆಯನ್ನು ಸಾಧಿಸಲು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅತ್ಯಾವಶ್ಯಕವಾಗಿದ್ದು, ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅವರು ಸಂಕ್ಷಿಪ್ತವಾಗಿ ವಿವರಿಸಿದರು. ಪ್ರಚಾರಾಂದೋಲನಕ್ಕೆ ಸಂಬಂಧಿಸಿದಂತೆ ಸೂಕ್ತ ಯೋಜನೆಯನ್ನು ರೂಪಿಸಲು ಸೂಚಿಸಿದ ಅವರು, ಸಮೀಕ್ಷೆಯನ್ನು ಯಶಸ್ವಿಯಾಗಿ ಕೈಗೊಳ್ಳಲು ಎಲ್ಲರೂ ಸಹಕರಿಸುವಂತೆ ಕೋರಿದರು.
ಸಭೆಯಲ್ಲಿ ಸಮೀಕ್ಷೆಯ ವಿಶೇಷಾಧಿಕಾರಿ ಶ್ರೀ ಡಿ.ಎನ್.ನಾಯಕ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾದ ಶ್ರೀ ಎನ್.ಆರ್.ವಿಶುಕುಮಾರ್ ಹಾಜರಿದ್ದರು.

0 comments:
Post a Comment