PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಮಾ.೧೮   : ಕೈಗಾರಿಕಾ ಮತ್ತು ವಾಣೀಜ್ಯ ಇಲಾಖೆ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಹಾಗೂ ಕುಕನೂರಿನ ವಿದ್ಯಾನಂದ ಗುರುಕುಲ ಶಿಕ್ಷಣ ವಿಶ್ವಸ್ಥ ಮಂಡಳಿ ಇವರುಗಳ ಸಂಯುಕ್ತಾಶ್ರಯದಲ್ಲಿ ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮ ಮಾ.೨೦ ರಂದು ಬೆಳಿಗ್ಗೆ ೧೧ ಗಂಟೆಗೆ ಕುಕನೂರಿನ ಡಾ|| ಜಿ.ಎಸ್.ಎಮ್.ಆರ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
   ಕರ್ನಾಟಕ ಸ್ವಯಂ ಉದ್ಯೋಗ ಯೋಜನೆಯಡಿ ಏರ್ಪಡಿಸಲಾಗಿರುವ ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮವನ್ನು ಜಿ.ಪಂ. ಸದಸ್ಯ ಈರಣ್ಣ ಕುಡಗುಂಟಿ ಉದ್ಘಾಟಿಸಲಿದ್ದಾರೆ.  ಕುಕನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗರತ್ನ ಕಲ್ಮನಿ ಅಧ್ಯಕ್ಷತೆ ವಹಿಸಲಿದ್ದು, ಯಲಬುರ್ಗಾ ತಾಲೂಕಾ ಪಂಚಾಯತ್ ಅಧ್ಯಕ್ಷೆ ಮಹಾದೇವಿ ಕಳಕಪ್ಪ ಕಂಬಳಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಪಿ. ನಾಗೇಶ, ಸಹಾಯಕ ನಿರ್ದೇಶಕ ಕೆ.ಭೀಮಪ್ಪ, ವಿದ್ಯಾನಂದ ಗುರುಕುಲ ಶಿಕ್ಷಣ ವಿಶ್ವಸ್ಥ ಮಂಡಳಿಯ ಕಾರ್ಯದರ್ಶಿ ಕೆ.ಆರ್.ಕುಲಕರ್ಣಿ, ಜಂಟಿ ಕಾರ್ಯದರ್ಶಿ ಜಿ.ವಿ. ಜಹಗೀರದಾರ, ಜಿ.ಎಸ್.ಎಮ್.ಆರ್ ಪಾಲಿಟೆಕ್ನಿಕ್ ಪ್ರಾಚಾರ್ಯ ಎನ್.ಆರ್. ಕುಕನೂರ, ಕಿಯೋನಿಕ್ಸ್ ಪ್ರಾಂಚೈಸಿ ರೇಣುಕಾ ಪಾಟೀಲ್ ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ತರಬೇತಿ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಅವಶ್ಯವಿರುವ ಮಾಹಿತಿಗಳನ್ನು ನೀಡಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ೧೮ ರಿಂದ ೩೫ ವರ್ಷ ವಯಸ್ಸಿನ ವಯೋಮಿತಿಯಲ್ಲಿರಬೇಕು. ಕನಿಷ್ಠ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ಆಸಕ್ತರು ಮಾ.೨೦ ರಂದು ಬೆಳಿಗ್ಗೆ ೧೦ ಗಂಟೆಗೆ ನೇರವಾಗಿ ಕಾರ್ಯಕ್ರಮ ಸ್ಥಳಕ್ಕೆ ಹಾಜರಾಗಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ ಶಿವಾನಂದ ಎಲಿಗಾರ, ಸಹಾಯಕ ನಿರ್ದೇಶಕರು, ಸಿಡಾಕ್, ಧಾರವಾಡ, ಮೊ: ೯೪೪೮೮೧೨೯೭೪ ಹಾಗೂ ರೇಣೂಕಾ ಪಾಟೀಲ್, ಕಿಯೋನಿಕ್ಸ್ ಪ್ರಾಂಚೈಸಿ, ಇನ್-ಫೋಟೆಕ್ ಡಾಟ್ ಕಾಂ, ಕುಕನೂರ ಮೊ: ೯೮೮೬೧೦೨೨೧೦ ಇವರನ್ನು ಸಂಪರ್ಕಿಸಬಹುದು .

Advertisement

0 comments:

Post a Comment

 
Top