PLEASE LOGIN TO KANNADANET.COM FOR REGULAR NEWS-UPDATES

   ಹೊಸ ಪಡಿತರ ಚೀಟಿಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವವರು ಕುಟುಂಬದ ೨೧ ವರ್ಷ ಮೇಲ್ಪಟ್ಟ ವಯಸ್ಸಿನ ಎಲ್ಲ ಸದಸ್ಯರ EPIC ಸಂಖ್ಯೆ (ಮತದಾರರ ಗುರುತಿನ ಚೀಟಿ ಸಂಖ್ಯೆ) ಯನ್ನು ನೀಡಲು ಸೂಚನೆ ನೀಡಲಾಗಿದೆ ಅಲ್ಲದೆ   ಇದುವರೆಗೂ ಬೆರಳಚ್ಚು (ಬಯೋಮೆಟ್ರಿಕ್) ನೀಡಿ, ಪಡಿತರ ಚೀಟಿ ಪಡೆದುಕೊಳ್ಳದೇ ಇರುವವರ ಪಡಿತರ ಕಾರ್ಡುಗಳನ್ನು ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ತಿಳಿಸಿದ್ದಾರೆ. 
  ಕೊಪ್ಪಳ ಜಿಲ್ಲೆಯಲ್ಲಿ ಪಡಿತರ ಚೀಟಿಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿರುವವರ ಪೈಕಿ ಇನ್ನೂ ಸುಮಾರು ೧೪,೬೮೯ ಅರ್ಜಿದಾರರು ತಮ್ಮ EPIC (ಮತದಾರರ ಗುರುತಿನ ಚೀಟಿ) ಸಂಖ್ಯೆಯನ್ನು ಸಲ್ಲಿಸುವುದು ಬಾಕಿ ಇದ್ದು, ಎಸ್‌ಎಮ್‌ಎಸ್ ಮುಖಾಂತರ, ಫೋಟೋ ಬಯೋಕೇಂದ್ರಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶದವರು ಗ್ರಾಮ ಪಂಚಾಯಿತಿಗಳಲ್ಲಿ ತಪ್ಪದೇ ಸಲ್ಲಿಸಬೇಕು. ಅದರಂತೆ ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು ೫,೩೦೮ ಪಡಿತರ ಚೀಟಿಗಳನ್ನು ಮುದ್ರಿಸಿ, ವಿತರಣೆಗಾಗಿ ಸಿದ್ಧಪಡಿಸಿದ್ದು, ಅವುಗಳನ್ನು ಅರ್ಜಿದಾರರು ಈವರೆಗೂ ಬೆರಳಚ್ಚು ನೀಡಿ ಪಡೆದುಕೊಂಡಿಲ್ಲ.  ಅಂತಹ ನಗರ ಪ್ರದೇಶದ ಅರ್ಜಿದಾರರು ತಾಲೂಕು ಕಚೇರಿಯಲ್ಲಿ ಹಾಗೂ ಗ್ರಾಮೀಣ ಪ್ರದೇಶದ ಅರ್ಜಿದಾರರು ಆಯಾ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ, ಮಾ.೩೧ ರೊಳಗಾಗಿ ಬೆರಳಚ್ಚು (ಬಯೋಮೆಟ್ರಿಕ್) ನೀಡಿ, ಪಡಿತರ ಚೀಟಿಗಳನ್ನು ಪಡೆದುಕೊಳ್ಳಬೇಕು. 
  ಒಂದು ವೇಳೆ ನಿಗದಿಪಡಿಸಿದ ಕಾಲಮಿತಿಯೊಳಗಾಗಿ ಕುಟುಂಬದ ೨೧ ವರ್ಷ ಮೇಲ್ಪಟ್ಟ ವಯಸ್ಸಿನ ಸದಸ್ಯರ EPIC ಸಂಖ್ಯೆಯನ್ನು ಸಲ್ಲಿಸದೇ ಇರುವ ಅರ್ಜಿಗಳನ್ನು ಹಾಗೂ ಬೆರಳಚ್ಚು (ಬಯೋಮೆಟ್ರಿಕ್) ನೀಡಿ ಪಡೆದುಕೊಳ್ಳದೇ ಇರುವವರ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Advertisement

0 comments:

Post a Comment

 
Top