ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶುಕ್ರವಾರದಂದು ಒಟ್ಟು ೧೪ ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಕನ್ನಡ ವಿಷಯ ಪರೀಕ್ಷೆಗೆ ಕೊಪ್ಪಳ ಜಿಲ್ಲೆಯ ೭೪೧೨ ವಿದ್ಯಾರ್ಥಿಗಳು ಹಾಜರಾಗಿದ್ದು, ೩೨೪ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಪಿಯುಸಿ ಪರೀಕ್ಷೆಯ ಕನ್ನಡ ವಿಷಯ ಪರೀಕ್ಷೆ ತೆಗೆದುಕೊಂಡಿರುವ ೭೭೩೬ ವಿದ್ಯಾರ್ಥಿಗಳ ಪೈಕಿ ೭೪೧೨ ವಿದ್ಯಾರ್ಥಿಗಳು ಹಾಜರಾಗಿದ್ದು, ೩೨೪ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕೊಪ್ಪಳ ತಾಲೂಕಿನಲ್ಲಿ ೨೫೬೪ ವಿದ್ಯಾರ್ಥಿಗಳ ಪೈಕಿ ೨೪೮೩ ವಿದ್ಯಾರ್ಥಿಗಳು ಹಾಜರಾಗಿದ್ದು, ೮೧ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಗಂಗಾವತಿ ತಾಲೂಕಿನಲ್ಲಿ ೨೮೬೦ ವಿದ್ಯಾರ್ಥಿಗಳ ಪೈಕಿ ೨೭೬೫ ವಿದ್ಯಾರ್ಥಿಗಳು ಹಾಜರಿದ್ದು, ೯೫ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಕುಷ್ಟಗಿ ತಾಲೂಕಿನಲ್ಲಿ ೧೧೮೪ ವಿದ್ಯಾರ್ಥಿಗಳ ಪೈಕಿ ೧೧೨೩ ಹಾಜರಿದ್ದು, ೬೧ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಯಲಬುರ್ಗಾ ತಾಲೂಕಿನಲ್ಲಿ ೧೧೨೮ ವಿದ್ಯಾರ್ಥಿಗಳ ಪೈಕಿ ೧೦೪೧ ವಿದ್ಯಾರ್ಥಿಗಳು ಹಾಜರಾಗಿದ್ದು, ೮೭ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್. ಶಿಂಧಾ ತಿಳಿಸಿದ್ದಾರೆ.
0 comments:
Post a Comment