PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಮಾ. ೨೩:  ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸೋಮವಾರದಂದು ಒಟ್ಟು ೧೪ ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಇತಿಹಾಸ ಮತ್ತು ಗಣಕ ವಿಜ್ಞಾನ ವಿಷಯ ಪರೀಕ್ಷೆಗೆ ಕೊಪ್ಪಳ ಜಿಲ್ಲೆಯ ೬೬೦೯ ವಿದ್ಯಾರ್ಥಿಗಳು ಹಾಜರಾಗಿದ್ದು,  ೩೭೮ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.  ಅಲ್ಲದೆ  ಇಬ್ಬರು ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
  ಪಿಯುಸಿ ಪರೀಕ್ಷೆಯ ಇತಿಹಾಸ ವಿಷಯ ಪರೀಕ್ಷೆ ತೆಗೆದುಕೊಂಡಿರುವ ೬೬೬೫ ವಿದ್ಯಾರ್ಥಿಗಳ ಪೈಕಿ ೬೨೯೧ ವಿದ್ಯಾರ್ಥಿಗಳು ಹಾಜರಾಗಿದ್ದು, ೩೭೪ ವಿದ್ಯಾರ್ಥಿಗಳು ಗೈರಾಗಿದ್ದಾರೆ.  ಕೊಪ್ಪಳ ತಾಲೂಕಿನಲ್ಲಿ ೨೨೬೦ ವಿದ್ಯಾರ್ಥಿಗಳ ಪೈಕಿ ೨೧೫೮ ವಿದ್ಯಾರ್ಥಿಗಳು ಹಾಜರಾಗಿದ್ದು, ೧೦೨ ವಿದ್ಯಾರ್ಥಿಗಳು ಗೈರಾಗಿದ್ದಾರೆ.  ಗಂಗಾವತಿ ತಾಲೂಕಿನಲ್ಲಿ ೨೨೫೧ ವಿದ್ಯಾರ್ಥಿಗಳ ಪೈಕಿ ೨೧೪೬ ವಿದ್ಯಾರ್ಥಿಗಳು ಹಾಜರಿದ್ದು, ೧೦೫ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಕುಷ್ಟಗಿ ತಾಲೂಕಿನಲ್ಲಿ ೧೧೨೮ ವಿದ್ಯಾರ್ಥಿಗಳ ಪೈಕಿ ೧೦೫೭ ಹಾಜರಿದ್ದು, ೭೧ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಯಲಬುರ್ಗಾ ತಾಲೂಕಿನಲ್ಲಿ ೧೦೨೬ ವಿದ್ಯಾರ್ಥಿಗಳ ಪೈಕಿ ೯೩೦ ವಿದ್ಯಾರ್ಥಿಗಳು ಹಾಜರಾಗಿದ್ದು, ೯೬ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.  ಗಂಗಾವತಿಯ ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ನಡೆದ ಇತಿಹಾಸ ವಿಷಯ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.
  ಗಣಕ ವಿಜ್ಞಾನ ವಿಷಯ ಪರೀಕ್ಷೆ ತೆಗೆದುಕೊಂಡಿರುವ ೩೨೨ ವಿದ್ಯಾರ್ಥಿಗಳ ಪೈಕಿ ೩೧೮ ವಿದ್ಯಾರ್ಥಿಗಳು ಹಾಜರಾಗಿದ್ದು, ೦೪ ವಿದ್ಯಾರ್ಥಿಗಳು ಗೈರಾಗಿದ್ದಾರೆ.  ಕೊಪ್ಪಳ ತಾಲೂಕಿನಲ್ಲಿ ೧೬ ವಿದ್ಯಾರ್ಥಿಗಳ ಪೈಕಿ ೧೬ ವಿದ್ಯಾರ್ಥಿಗಳು ಹಾಜರಾಗಿದ್ದಾರೆ.  ಗಂಗಾವತಿ ತಾಲೂಕಿನಲ್ಲಿ ೧೯೬ ವಿದ್ಯಾರ್ಥಿಗಳ ಪೈಕಿ ೧೯೩ ವಿದ್ಯಾರ್ಥಿಗಳು ಹಾಜರಿದ್ದು, ೦೪ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.  ಗಂಗಾವತಿ ತಾಲೂಕು ಶ್ರೀರಾಮನಗರದ ಎಕೆಆರ್‌ಡಿ ಪ.ಪೂ. ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಗಣಕ ವಿಜ್ಞಾನ ವಿಷಯ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ ಎಂದು  ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್. ಶಿಂಧಾ   ತಿಳಿಸಿದ್ದಾರೆ.

Advertisement

0 comments:

Post a Comment

 
Top