ಕೊಪ್ಪಳ ಜಿಲ್ಲೆಯಲ್ಲಿ ಮಾ. ೧೨ ರಿಂದ ೨೭ ರವರೆಗೆ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳು ೧೪ ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷೆಯನ್ನು ಸುಗಮ ಹಾಗೂ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆರ್.ಆರ್. ಜನ್ನು ಆದೇಶ ಹೊರಡಿಸಿದ್ದಾರೆ.
ಮಾ.೧೨ ರಿಂದ ಮಾ.೨೭ ರವರೆಗೆ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಸದರಿ ಪರೀಕ್ಷೆಗಳು ಸುವ್ಯವಸ್ಥಿತವಾಗಿ ನಡೆಯುವ ಉದ್ದೇಶದಿಂದ ಜಿಲ್ಲೆಯ ಒಟ್ಟು ೧೪ ಪರೀಕ್ಷಾ ಕೇಂದ್ರಗಳ ಸುತ್ತ ೨೦೦ ಮೀಟರ್ ವ್ಯಾಪ್ತಿಯಲ್ಲಿ ಪರೀಕ್ಷಾ ದಿನದಂದು ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೧ ಗಂಟೆಯವರೆಗೆ ಭಾರತೀಯ ದಂಡ ಸಂಹಿತೆ ೧೯೮೩ ರ ಕಲಂ ೧೪೪ ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿಷೇಧಾಜ್ಞೆ ಅನ್ವಯ ಪರೀಕ್ಷಾ ಕೇಂದ್ರಗಳ ಸುತ್ತ ೨೦೦ ಮೀಟರ್ ವ್ಯಾಪ್ತಿಯಲ್ಲಿ ಝರಾಕ್ಸ್ ಎಸ್.ಟಿ.ಡಿ, ಮೊಬೈಲ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಪರವಾನಿಗೆ ಇಲ್ಲದೇ ಯಾರಿಗೂ ಪ್ರವೇಶವಿರುವುದಿಲ್ಲ ಹಾಗೂ ೨೦೦ ಮೀಟರ್ ಪರೀಕ್ಷಾ ಕೇಂದ್ರದ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವಂತಿಲ್ಲ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

0 comments:
Post a Comment