ಬೆಂಗಳೂರು, ಮಾರ್ಚ್ 26 : ಸದಸ್ಯರು ಕೇಳಿರುವ ಲಿಖಿತ ಪ್ರಶ್ನೆಗೆ ಉತ್ತರ ನೀಡಲು ತಡಮಾಡುವ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಪರಿಷತ್ತಿನಲ್ಲಿಂದು ತಿಳಿಸಿದರು.
ವಿಧಾನ ಪರಿಷತ್ತಿನಲ್ಲಿಂದು ಸಭಾಧ್ಯಕ್ಷ ಎಸ್.ಆರ್. ಪಾಟೀಲ್ ಅವರು ಸದನದಲ್ಲಿ 154 ಲಿಖಿತ ಪ್ರಶ್ನೆಗಳಲ್ಲಿ 51 ಪ್ರಶ್ನೆಗಳಿಗೆ ಉತ್ತರ ನೀಡಲಾಗಿದೆಯೆಂದು ಮಂಡಿಸಿದಾಗ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರು ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಡಲು ಅಧಿಕಾರಿಗಳು ಉದಾಸೀನ ಮಾಡುತ್ತಿದ್ದಾರೆಂದು ಗಮನ ಸೆಳೆದ ಹಿನ್ನೆಲೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು ತಾವು ಯಾವ ಯಾವ ಇಲಾಖೆಗಳಿಂದ ಇದುವರೆಗೂ ಉತ್ತರಗಳು ಬಂದಿಲ್ಲ, ಅದಕ್ಕೆ ಕಾರಣವೇನೆಂಬ ಮಾಹಿತಿಯನ್ನು ತರಿಸಿಕೊಂಡು ಪರಿಶೀಲಿಸುತ್ತೇನೆ. ಸಕಾರಣವಿಲ್ಲದ ಉತ್ತರ ನೀಡಲು ವಿಳಂಬ ಮಾಡಿರುವ ಅಧಿಕಾರಿಗಳ ಮೇಲೆ ಸೂಕ್ತಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.
0 comments:
Post a Comment