PLEASE LOGIN TO KANNADANET.COM FOR REGULAR NEWS-UPDATES


ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ. ೧೨ ರಿಂದ ೨೭ ರವರೆಗೆ ಜರುಗಲಿದ್ದು, ವಿದ್ಯಾರ್ಥಿಗಳು ನಿರ್ಭೀತಿಯಿಂದ ಹಾಗೂ ಆತ್ಮ ವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಬೇಕು.   ಯಾವುದೇ ಬಗೆಯ ಪರೀಕ್ಷಾ ದುರ್ನಡತೆ ತಡೆಗೆ ಈಗಾಗಲೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅವರು ತಿಳಿಸಿದ್ದಾರೆ.
  ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸುಗಮವಾಗಿ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಈಗಾಗಲೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.  ಇದಕ್ಕಾಗಿ ಒಟ್ಟು ೧೪ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಮುಖ್ಯ ಅಧೀಕ್ಷಕರು, ಸಹಮುಖ್ಯ ಅಧೀಕ್ಷಕರು ಹಾಗೂ ಉತ್ತರ ಪತ್ರಿಕೆ ಪಾಲಕರನ್ನು ನೇಮಕ ಮಾಡಲಾಗಿದೆ.  ಪ್ರತಿ ಪರೀಕ್ಷಾ ಕೇಂದ್ರಕ್ಕೂ ಪ್ರತ್ಯೇಕ ಜಾಗೃತ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.  ಅಲ್ಲದೆ ೦೫ ಸಂಚಾರಿ ಜಾಗೃತ ದಳವನ್ನು ನೇಮಕ ಮಾಡಲಾಗಿದೆ.  ಜಿಲ್ಲಾ ವ್ಯಾಪ್ತಿಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲನೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.  ವಿದ್ಯಾರ್ಥಿಗಳು ಆತ್ಮ ವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ, ಜಿಲ್ಲೆಗೆ ಉತ್ತಮ ಕೀರ್ತಿ ತರಲು ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅವರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

Advertisement

0 comments:

Post a Comment

 
Top