ಕೊಪ್ಪಳ ಮಾ. : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ತಾಯಂದಿರ ಚಾವಡಿ ರಚನೆ ಹಾಗೂ ಕಾರ್ಯಗಳ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಇದೇ ಸಂದರ್ಭದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗವನ್ನು ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಂತೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾ. ೨೬ ರಂದು ಬೆಳಿಗ್ಗೆ ೧೧ ಗಂಟೆಗೆ ಜಿ.ಪಂ. ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ ಸಪ್ಪಣ್ಣನವರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಆರ್.ಆರ್.ಜನ್ನು ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಪಿ.ರಾಜಾ, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ, ಜಿಲ್ಲಾ ವಾರ್ತಾಧಿಕಾರಿ ತುಕಾರಾಂ ರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ವಸಂತ ಪ್ರೇಮಾ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಂತೆ ಸಂಪನ್ಮೂಲ ಅಧಿಕಾರಿ ಸಿ.ವಿ. ಜಡಿಯವರ್ ಅವರು ಮಾಹಿತಿ ನೀಡುವರು. ಬಳಿಕ ನಡೆಯಲಿರುವ ಉಪನ್ಯಾಸ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ವಸಂತ ಪ್ರೇಮಾ ಅವರು ತಾಯಂದಿರ ಚಾವಡಿಯ ರಚನೆ ಮತ್ತು ಕಾರ್ಯಗಳ ಕುರಿತು. ಪೊಲೀಸ್ ತರಬೇತುದಾರ ಸೋಮಶೇಖರ ಅವರು ಲೈಂಗಿಕ ದೌರ್ಜನ್ಯದಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-೨೦೧೨ ಕುರಿತು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮುನಿರಾಜಪ್ಪ ಅವರು ಮಕ್ಕಳಿಗೆ ಹಾಗೂ ದೌರ್ಜನ್ಯಕ್ಕೊಳಗಾದ ಮಕ್ಕಳಿಗೆ ಘಟಕದಿಂದ ಲಭ್ಯವಿರುವ ಸೇವೆಗಳ ಕುರಿತು ವಿಶೇಷ ಉಪನ್ಯಾಸ ನೀಡುವರು.
0 comments:
Post a Comment