ಕೊಪ್ಪಳ ಮಾ. ೨೩ : ಆದ್ಯ ವಚನಕಾರ, ನೇಕಾರ ಸಂತ ದೇವರ ದಾಸಿಮಯ್ಯ ಅವರ ಜಯಂತಿ ಕಾರ್ಯಕ್ರಮ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಾ. ೨೫ ರಂದು ಕೊಪ್ಪಳದಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಸಮಾರಂಭದ ಉದ್ಘಾಟನೆ ನೆರವೇರಿಸುವರು. ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸಲಿದ್ದು, ಜಿ.ಪಂ. ಅಧ್ಯಕ್ಷ ಅಮರೇಶ್ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ್, ಶರಣಪ್ಪ ಮಟ್ಟೂರ್, ಅಮರನಾಥ ಪಾಟೀಲ, ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೈಯ್ಯದ್ ಜುಲ್ಲು ಖಾದರ್ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲಕುಮಾರ್, ಜಿ.ಪಂ. ಉಪಾಧ್ಯಕ್ಷ ವಿನಯಕುಮಾರ್ ಮೇಲಿನಮನಿ, ನಗರಸಭೆ ಅಧ್ಯಕ್ಷೆ ಬಸಮ್ಮ ರಾಮಣ್ಣ ಹಳ್ಳಿಗುಡಿ, ತಾ.ಪಂ. ಅಧ್ಯಕ್ಷೆ ವಿಶಾಲಾಕ್ಷಿ ಮಾಲಿಪಾಟೀಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಹಿರಿಯ ಸಾಹಿತಿ ವಿಠ್ಠಪ್ಪ ಗೋರಂಟ್ಲಿ ಅವರು ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸ ನೀಡುವರು ಎಂದು ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ತಿಳಿಸಿದ್ದಾರೆ.
0 comments:
Post a Comment