PLEASE LOGIN TO KANNADANET.COM FOR REGULAR NEWS-UPDATES


ದೇವರದಾಸಿಮಯ್ಯ ಮತ್ತು ದಲಿತ ವಚನಕಾರರ ಜಯಂತಿ ಆಚರಣೆಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದ್ದು, ಮಾ. ೨೫ ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಹೇಳಿದರು.
   ದೇವರದಾಸಿಮಯ್ಯ ಮತ್ತು ದಲಿತ ವಚನಕಾರರ ಜಯಂತಿ ಆಚರಣೆಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 
  ದೇವರದಾಸಿಮಯ್ಯ ಮತ್ತು ದಲಿತ ವಚನಕಾರರ ಜಯಂತಿ ಉತ್ಸವವನ್ನು  ಮಾ. ೨೫ ರಂದು ಜಿಲ್ಲಾ ಕೇಂದ್ರವಾಗಿರುವ ಕೊಪ್ಪಳದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು.  ಕಾರ್ಯಕ್ರಮ ಆಯೋಜಿಸಲು ಸರ್ಕಾರ ತಲಾ ೫೦ ಸಾವಿರ ರೂ.ಗಳ ಅನುದಾನ ಬಿಡುಗಡೆ ಮಾಡಿದೆ.  ಜಯಂತಿ ಅಂಗವಾಗಿ ಅಂದು ದೇವರದಾಸಿಮಯ್ಯ ಹಾಗೂ ದಲಿತ ವಚನಕಾರರ ಭಾವಚಿತ್ರಗಳ ಮೆರವಣಿಗೆಯನ್ನು ನಗರದಲ್ಲಿ ಆಯೋಜಿಸಲಾಗುವುದು.  ಮೆರವಣಿಗೆಯಲ್ಲಿ ವೀರಗಾಸೆ ತಂಡೆವೂ ಸೇರಿದಂತೆ ಹಲವು ಜಾನಪದ ಕಲಾ ತಂಡಗಳು ಭಾಗವಹಿಸಿ, ಮೆರವಣಿಗೆಯನ್ನು ಆಕರ್ಷಕಗೊಳಿಸಲಿವೆ.    ಅಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಸಮಾರಂಭ ಜರುಗಲಿದ್ದು, ಸಮಾರಂಭದಲ್ಲಿ ವಿಶೇಷ ಉಪನ್ಯಾಸ ನೀಡಲು ವಿಠ್ಠಪ್ಪ ಗೋರಂಟ್ಲಿ ಅವರನ್ನು ಆಹ್ವಾನಿಸಲಾಗುವುದು.  ಜಯಂತಿ ಆಚರಣೆಯಲ್ಲಿ ಎಲ್ಲ ಸಾರ್ವಜನಿಕರು, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು.  ಮೆರವಣಿಗೆ ಹಾಗೂ ಸಮಾರಂಭದಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿಗಳು ತಪ್ಪದೆ ಪಾಲ್ಗೊಳ್ಳಬೇಕು.  ಮೆರವಣಿಗೆ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್, ಅಗತ್ಯ ಕುಡಿಯುವ ನೀರಿನ ವ್ಯವಸ್ಥೆ, ಮೆರವಣಿಗೆ ಸಾಗಿ ಬರುವ ರಸ್ತೆಯನ್ನು ಸ್ವಚ್ಛಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಹೇಳಿದರು.
        ಸಭೆಯಲ್ಲಿ ಜಿಲ್ಲಾ ಬಿಸಿಎಂ ಅಧಿಕಾರಿ ಬಿ. ಕಲ್ಲೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಟಿ. ಕೊಟ್ರಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವೈ.ಹೆಚ್. ಲಂಬು, ಡಿಡಿಪಿಐ ಶ್ಯಾಮಸುಂದರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ್ ಬಾಸೂರ,  ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶುಭಾ,  ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು,  ನೇಕಾರರ ಒಕ್ಕೂಟದ ಅಧ್ಯಕ್ಷ ಕೆ. ಕಾಳಪ್ಪ ಸೇರಿದಂತೆ ಸಮಾಜದ ಮುಖಂಡರಾದ  ನಾಗರಾಜ ಬಳ್ಳಾರಿ, ವಾಸು ಕೊಳಗದ, ಷಣ್ಮುಖಪ್ಪ ತಾವರಗೇರಾ, ಮಲ್ಲಿಕಾರ್ಜುನ ನೂಲ್ವಿ, ರಮೇಶ್ ಹ್ಯಾಟಿ, ಡಾ. ಕೊಟ್ರೇಶ್ ಶಡ್ಮಿ ಗಣ್ಯರಾದ ಡಾ. ಜ್ಞಾನಸುಂದರ್, ಶಿವಾನಂದ ಹೊದ್ಲೂರು ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆ ನೀಡಿದರು.

Advertisement

0 comments:

Post a Comment

 
Top