ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಸಚಿವ ಎಚ್.ಕೆ. ಪಾಟೀಲ್ ಅವರು ಸಮಾರಂಭದ ಉದ್ಘಾಟನೆ ನೆರವೇರಿಸಲಿದ್ದು, ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ವಸ್ತುಪ್ರದರ್ಶನ ಮಳಿಗೆಗಳ ಉದ್ಘಾಟನೆ ನೆರವೇರಿಸುವರು. ಸಮಾರಂಭದ ಅಧ್ಯಕ್ಷತೆಯನ್ನು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ವಹಿಸಲಿದ್ದು, ಜಿ.ಪಂ. ಅಧ್ಯಕ್ಷ ಅಮರೇಶ್ ಕುಳಗಿ ಅವರು ಅಂದು ಮಧ್ಯಾಹ್ನ ೨-೩೦ ಗಂಟೆಗೆ ಜಿಲ್ಲಾ ಕ್ರೀಡಾಂಗಣ ಆವರಣದಲ್ಲಿ ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಚಾಲನೆ ನೀಡುವರು. ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ್, ಶರಣಪ್ಪ ಮಟ್ಟೂರ್, ಅಮರನಾಥ ಪಾಟೀಲ್, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಅಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದರ್ ಖಾದ್ರಿ, ಕಾಡಾ ಅಧ್ಯಕ್ಷ ಎ. ವಸಂತಕುಮಾರ್, ಜಿ.ಪಂ. ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ತಾ.ಪಂ. ಅಧ್ಯಕ್ಷೆ ವಿಶಾಲಾಕ್ಷಿ ಮಾಲಿಪಾಟೀಲ, ನಗರಸಭೆ ಅಧ್ಯಕ್ಷೆ ಬಸಮ್ಮ ಹಳ್ಳಿಗುಡಿ ಸೇರಿದಂತೆ ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರುಗಳು, ಸದಸ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಕಾರ್ಯದರ್ಶಿ ಗಂಗಾರಾಮ ಬಡೇರಿಯಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲಕುಮಾರ, ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಇಲಾಖೆ ಆಯುಕ್ತ ಮನೀಶ್ ಮೌದ್ಗಿಲ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತ ಬಿ.ಎನ್. ಕೃಷ್ಣಯ್ಯ, ಸಂಜೀವಿನಿ ಯೋಜನೆ ಅಭಿಯಾನ ನಿರ್ದೇಶಕ ಡಿ.ವಿ. ಸ್ವಾಮಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮುಖ್ಯ ಅಭಿಯಂತರ ಆರ್.ಪಿ. ಕುಲಕರ್ಣಿ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.
Home
»
Government schemes projects
»
karnataka news information
»
koppal district information
»
Koppal News
» ರಾಜ್ಯ ಮಟ್ಟದ ನೀರು ಮತ್ತು ನೈರ್ಮಲ್ಯ ಅರಿವು ಸಪ್ತಾಹ : ಮಾ. ೧೫ ರಂದು ಕೊಪ್ಪಳದಲ್ಲಿ ಉದ್ಘಾಟನೆ
Advertisement
Subscribe to:
Post Comments (Atom)

0 comments:
Post a Comment