ಕೊಪ್ಪಳ, ಮಾ.೨೭ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಮಾ.೩೦ ರಿಂದ ಏ.೧೩ ರವರೆಗೆ ಜಿಲ್ಲೆಯ ೬೨ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆ ಸುಗಮವಾಗಿ ನಡೆಯಲು ಅನುಕೂಲವಾಗುವಂತೆ ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ೨೦೦ ಮೀ. ವ್ಯಾಪ್ತಿಯಲ್ಲಿ ೧೪೪ ಕಲಂ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆರ್.ಆರ್.ಜನ್ನು ಅವರು ಆದೇಶ ಹೊರಡಿಸಿದ್ದಾರೆ.
ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗಳು ಸುಗಮವಾಗಿ ಹಾಗೂ ಶಾಂತಿಯುತವಾಗಿ ನಡೆಯಲು ಅನುಕೂಲವಾಗುವಂತೆ ಮಾ.೩೦ ರಿಂದ ಏ.೧೩ ರವರೆಗೆ ಬೆಳಿಗ್ಗೆ ೯.೦೦ ರಿಂದ ಮಧ್ಯಾಹ್ನ ೨.೦೦ ಗಂಟೆಯವರೆಗೆ ಭಾರತೀಯ ದಂಡ ಸಂಹಿತೆ ಕಲಂ ೧೪೪ ರ ಅನ್ವಯ ನಿಷೇಧಾಜ್ಞೆಯನ್ನು ಪರೀಕ್ಷಾ ಕೇಂದ್ರದ ೨೦೦ ಮೀ. ವ್ಯಾಪ್ತಿಯಲ್ಲಿ ಜಾರಿಗೊಳಿಸಲಾಗಿದೆ.
ಇದರನ್ವಯ ನಿಷೇಧಿತ ವ್ಯಾಪ್ತಿಯಲ್ಲಿ ಪರೀಕ್ಷಾ ಸಮಯದಲ್ಲಿ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದ ಕೇಂದ್ರಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಯಾವುದೇ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವುದು ನಿಷೇಧಿಸಲಾಗಿದೆ. ಮದುವೆ, ಶವ ಸಂಸ್ಕಾರ, ಹಾಗೂ ಇತರೆ ಧಾರ್ಮಿಕ ಕಾರ್ಯಕ್ರಮಗಳಿಗೆ ಈ ನಿಷೇಧಾಜ್ಞೆ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.
ಎಸ್.ಎಸ್.ಎಲ್.ಸಿ ಪರೀಕ್ಷೆ : ಜಿಲ್ಲಾ ಜಾಗೃತ ದಳ ರಚನೆ
ಕೊಪ್ಪಳ, ಮಾ.೨೮ : ಜಿಲ್ಲೆಯಲ್ಲಿ ಮಾ.೩೦ ರಿಂದ ಏ.೧೩ ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಹೋಗುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಜಾಗೃತ ದಳವನ್ನು ನೇಮಕ ಮಾಡಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲಾದ್ಯಂತ ಒಟ್ಟು ಎಂಟು ಜಾಗೃತ ದಳ ತಂಡಗಳನ್ನು ರಚಿಸಲಾಗಿದ್ದು, ಪ್ರತಿ ತಂಡದಲ್ಲಿಯೂ ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮುಖ್ಯಸ್ಥರಾಗಿರುವ ದಳದಲ್ಲಿ ಕೊಪ್ಪಳದ ಉ. ನಿ. ಕಛೇರಿಯ ವಿಷಯ ಪರಿವೀಕ್ಷಕ ರಾಮಣ್ಣ ಪತ್ತಾರ ಹಾಗೂ ಸ.ಶಿ.ಅ ಎ.ಪಿ.ಸಿ(ಪ್ರಭಾರಿ) ಶರಣಪ್ಪ ಬಳಿಗಾರ ಇವರನ್ನು ಸದಸ್ಯರಾಗಿ ನೇಮಿಸಲಾಗಿದೆ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಮುಖ್ಯಸ್ಥರಾಗಿರುವ ದಳದಲ್ಲಿ ತಾಲೂಕ ಪಂಚಾಯಿತಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಅಶೋಕ ಕುಲಕರ್ಣಿ ಮತ್ತು ಕಿತ್ತೂರ ರಾಣಿ ಚೆನ್ನಮ್ಮ ಪ್ರೌಢ ಶಾಲೆಯ ಸವಿತಾ ಬೋರಟ್ಟಿ ಇವರು ಸದಸ್ಯರಾಗಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ದಳದಲ್ಲಿ ಉ. ನಿ. ಕಛೇರಿಯ ವಿಷಯ ಪರಿವೀಕ್ಷಕ ಎಮ್.ಎಸ್.ಬಡದಾನಿ ಹಾಗೂ ಸರಕರಿ ಪದವಿ ಪೂರ್ವ ಕಾಲೇಜಿನ ಸ.ಶಿ ಬಸವರಾಜ ಪೋಲಿಸ್ ಪಾಟೀಲ್ ಸದಸ್ಯರಾಗಿದ್ದಾರೆ. ಅದರಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರ ದಳದಲ್ಲಿ ಸರಕಾರಿ ಪ್ರೌಢ ಶಾಲೆಯ ಬನ್ನಿಕಟ್ಟಿಯ ರಾಮರಡ್ಡಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಪ್ರೌಢ ಶಾಲೆಯ ಶಕುಂತಲಾ ಅಂಗಡಿ ಸದ್ಯರಾಗಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರ ದಳದಲ್ಲಿ ಕಿನ್ನಾಳ ಸರಕಾರಿ ಪದವಿ ಪೂರ್ವ ಕಾಲೇಜಿನ ಮಂಜುನಾಥ ಕಟ್ಟಿ ಮತ್ತು ಅಳವಂಡಿ ಬಾಲಕಿಯರ ಸರಕಾರಿ ಪ್ರೌಢ ಶಾಲೆಯ ಸುಮನ್ ಅವರು ಸದಸ್ಯರಾಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಮುಖ್ಯಸ್ಥರಾಗಿರುವ ದಳದಲ್ಲಿ ಸರಕಾರಿ ಪ್ರೌಢ ಶಾಲೆ ಕುದರಿಮೋತಿಯ ಬಸವರಾಜ ಪಟ್ಟೆದ್ ಮತ್ತು ಉ.ನಿ ಕಛೇರಿಯ ವಿಷಯ ಪರಿವೀಕ್ಷಕ ರಾವತ್ ನವಾಜ್ ಖಾನಂ ಅವರು ಸದಸ್ಯರಾಗಿದ್ದಾರೆ. ಜಿಲ್ಲಾ ಯೋಜನಾ ಉಪ ಸಮನ್ವಯಾಧಿಕಾರಿಗಳ ದಳದಲ್ಲಿ ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ವಿಜಯಕುಮಾರ ಅವರು ಸದಸ್ಯರಾಗಿದ್ದಾರೆ. ಜಿಲ್ಲಾ ಪಂಚಾಯತ್ ಅಕ್ಷರ ದಾಸೋಹ ಶಿಕ್ಷಣಾಧಿಕಾರಿಗಳು ಮುಖ್ಯಸ್ಥರಾಗಿರುವ ತಂಡದಲ್ಲಿ ಮುಕ್ಕುಂಪಿ ಪ್ರೌಢ ಶಾಲೆಯ ಅಶೋಕ ಗೌಡ ಮತ್ತು ಸರಕಾರಿ ಪ್ರೌಢ ಶಾಲೆ ವಟಪರ್ವಿಯ ದೀಪಕ್ ಎಂ.ನಾಯಕ್ ಅವರು ಸದಸ್ಯರಾಗಿ ನೇಮಿಸಲಾಗಿದೆ ಎಂದು ಡಿಡಿಪಿಐ ಶ್ಯಾಮಸುಂದರ್ ತಿಳಿಸಿದ್ದಾರೆ.
0 comments:
Post a Comment