ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹೊಂಗಿರಣ ಸಮಾಜ ಸೇವಾ ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ಮಂಗಳಮುಖಿ ಜನರಿಗಾಗಿ ವಿಶೇಷ ಕಾನೂನು ಅರಿವು-ನೆರವು ಕಾರ್ಯಕ್ರಮ ಮಾ.೦೩ ರ ಸಂಜೆ ೪.೩೦ ಗಂಟೆಗೆ ನಗರದ ಜಿಲ್ಲಾ ಕೋರ್ಟ್ ಆವರಣದಲ್ಲಿರುವ ಸಾಕ್ಷಿದಾರರ ಮೊಗಸಾಲೆಯಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ. ಎಸ್. ಸಪ್ಪಣ್ಣನವರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ವಸಂತಪ್ರೇಮಾ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಸಿವಿಲ್ ನ್ಯಾಯಾಧೀಶರಾಧ ಬಿ. ದಶರಥ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಬಿ ಪಾನಘಂಟಿ, ಕಾರ್ಯದರ್ಶಿ ರಾಜಶೇಖರ ಮಾಲಿಪಾಟೀಲ, ಜಿಲ್ಲಾ ಸರಕಾರಿ ವಕೀಲ ಬಿ.ಶರಣಪ್ಪ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಮರಾವ್, ಕರ್ನಾಟಕ ರಾಜ್ಯ ಮಂಗಳಮುಖಿಯರ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕಿ ಸುಧಾ ಎಂ.ಚಿದ್ರಿ, ಬೆಂಗಳೂರಿನ ಮಂಗಳಮುಖಿಯರಿಗೆ ಸಲಹೆಗಾರರಾದ ನಿಶಾ ಗೂಳೂರು(ಸಂಗಮ ಪಹೆಚಾನ್), ಹೊಂಗಿರಣ ಸಮಾಜ ಸೇವಾ ಸಂಸ್ಥೆಯ ಅಧ್ಯಕ್ಷ ರಮೇಶ ರಾಠೋಡ, ಕೆ.ಎಸ್.ಎ.ಪಿ.ಎಸ್. ಕಾರ್ಯಕ್ರಮಾಧಿಕಾರಿ ಡಾ|| ಬಸವರಡ್ಡಿ ಬಾಡಗಿ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ||ವಿರುಪಾಕ್ಷರಡ್ಡಿ ಮಾದಿನೂರ, ಸ್ನೇಹಾ ಮಹಿಳಾ ಮಂಡಳದ ಅಧ್ಯಕ್ಷೆ ಲಕ್ಷ್ಮಿ ಕಟ್ಟಿಮನಿ ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ವಕೀಲರಾದ ಎಸ್.ಎನ್. ದೇಸಾಯಿ ಮಂಗಳಮುಖಿಯರ ಹಕ್ಕುಗಳ ಕುರಿತು ವಿಶೇಷ ಉಪನ್ಯಾಸ ನೀಡುವರು.
0 comments:
Post a Comment