ಬೆಂಗಳೂರು, : ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯನ್ನು 120 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಮಟ್ದ ಸಂಸ್ಥೆಯನ್ನಾಗಿ ಮೇಲ್ದರ್ಜೆಗೇರಿಸಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ವಿಧಾನ ಪರಿಷತ್ತಿನಲ್ಲಿಂದು ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 600 ಹಾಸಿಗೆಯ ಸಾಮಥ್ರ್ಯವನ್ನು ಹೊಂದಿರುವ ಈ ಆಸ್ಪತ್ರೆಯಲ್ಲಿ ಹೊರ ರೋಗಿಗಳಾಗಿ ರೇಡಿಯೋ ಥೆರಪಿ ಚಿಕಿತ್ಸೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಿರುವುದರಿಂದ ರೇಡಿಯೋ ಥೆರಪಿ ರೋಗಿಗಳು ಕಾಯಬೇಕಾದ ಪರಿಸ್ಥಿತಿ ಇದೆ. ಆದ್ದರಿಂದ ಇನ್ನೂ ಹೆಚ್ಚಿನ ರೇಡಿಯೋ ಥೆರಪಿ ಚಿಕಿತ್ಸಾ ಘಟಕಗಳನ್ನು ತೆರೆಯಲು ತೀರ್ಮಾನಿಸಲಾಗಿದೆ ಎಂದರು.
ಪ್ರತಿ ವರ್ಷ ಸುಮಾರು 20 ಸಾವಿರ ರೋಗಿಗಳು ದಾಖಲಾಗುತ್ತಿದ್ದು, ನುರಿತÀ ತಜ್ಞ ವೈದ್ಯರುಗಳೂ ವಿಶ್ವ ದರ್ಜೆಯ ಗುಣಮಟ್ಟದ ಚಿಕಿತ್ಡೆಯನ್ನು ನೀಡುತ್ತಿದ್ದಾರೆ.
ಆದಾಗ್ಯೂ ಆಧುನಿಕತೆಗೆ ತಕ್ಕಂತೆ ಹಾಗೂ ರೋಗಿಗಳ ಚಿಕಿತ್ಸಾ ಸೌಕರ್ಯಗಳನ್ನು ಇನ್ನೂ ಉತ್ತಮ ಮಟ್ಟಕ್ಕೆ ಹೆಚ್ಚಸುವ ಸಲುವಾಗಿ ಕೇಂದ್ರ ಸರ್ಕಾರದ ಸಹಯೋಗದಲ್ಲಿ ಈ ಸಂಸ್ಥೆಯನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಈಗಾಗಲೇ 12 ಕೋಟಿ ರೂ. ಅನುದಾನಕ್ಕೆ ಸರ್ಕಾರಿ ಆದೇಶವಾಗಿದೆ. ಕೇಂದ್ರ ಸರ್ಕಾರ ಈಗಾಗಲೇ 67 ಕೋಟಿ ರೂ. ವೆಚ್ಚದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅತ್ಯುತ್ತಮ ಚಿಕಿತ್ಸಾ ಸೇವೆಗಳನ್ನು ನೀಡುತ್ತಿದೆ. ಒಂದೇ ಸೂರಿನಡಿ ಎಲ್ಲಾ ಸೇವೆಯನ್ನು ನೀಡಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಮುಂದಿನ ಒಂಭತ್ತು ತಿಂಗಳಲ್ಲಿ ಈ ಯೋಜನೆಯನ್ನು ಪೂರ್ಣಗೊಳಿಸಲಾಗುವುದೆಂದು ಸಚಿವರು ತಿಳಿಸಿದರು
0 comments:
Post a Comment